ಮೆಟ್ರೋ ನಗರಗಳಲ್ಲಿ ಸತತ 3ನೇ ದಿನವೂ ಪೆಟ್ರೋಲ್ ದರದಲ್ಲಿ ಏರಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.99 ರೂಪಾಯಿ ಆಗಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ.
ಇತ್ತ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 81.35 ರೂಪಾಯಿಗೆ ಏರಿಕೆಯಾಗಿದೆ. ಮಾಯಾನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 88.02 ರೂಪಾಯಿ ಆಗಿದ್ರೆ, ಕೋಲ್ಕತಾದಲ್ಲಿ ಪ್ರತಿ ಲೀಟರ್ 82.87ರೂ. ಆಗಿದೆ. ಚೆನ್ನೈನಲ್ಲಿ 84.40 ರೂ ಆಗಿದೆ.