ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬೆಂಗಳೂರು: ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಬೆಂಗಳೂರು ಟೆಕ್ ಸಮ್ಮೇಳನವನ್ನ ಉದ್ಘಾಟಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಟ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಮಾತನಾಡಿದ್ರು.. ಕನ್ನಡದ ಸ್ಟಾರ್ ನಟ ಪುನೀತ್ ರಾಜ್ಕುಮಾರ್ ಕಳೆದುಕೊಂಡಿದ್ದೇವೆ. ಅವರು ಪ್ರತಿಭಾನ್ವಿತ ನಟರಾಗಿ ಗುರುತಿಸಿಕೊಂಡಿದ್ದರು. ಸಾಕಷ್ಟು ಜನಪ್ರಿಯತೆ ಹೊಂದಿದವರಾಗಿದ್ದರು. ಪುನೀತ್ ರಾಜ್ಕುಮಾರ್ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳಿ ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಅರ್ಪಿಸಿದರು.
ಇಂದಿನಿಂದ ಮೂರು ದಿನಗಳ ಕಾಲ ತಾಜ್ ವೆಸ್ಟೆಂಡ್ ಹೊಟೇಲಿನಲ್ಲಿ ಟೆಕ್ ಸಮ್ಮೇಳನ ಆಯೋಜಿಸಲಾಗಿದೆ.. ರಾಜ್ಯಪಾಲ ಟಿ.ಸಿ.ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಐಟಿಬಿಟಿ ಸಚಿವ ಅಶ್ವಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಸೇರಿ ಹಲವು ಐಟಿ ಬಿಟಿ ವಲಯದ ರಾಷ್ಟ್ರೀಯ, ಅಂತರಾಷ್ಟ್ರೀಯ ಸಂಸ್ಥೆಗಳು, ಉದ್ಯಮಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ.