ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಕೆಎಸ್‌ಸಿಎ ಗದ್ದುಗೆ ಏರಿದ ವೆಂಕಟೇಶ್ ಪ್ರಸಾದ್ ಬ್ರಿಜೇಶ್ ಪಟೇಲ್ ಭದ್ರಕೋಟೆ ಛಿದ್ರ 12 ವರ್ಷಗಳ ಬಳಿಕ ರಾಜಬೀದಿಗೆ ಮರಳಿದ ಮಾಜಿ ವೇಗಿ

Venkatesh Prasad ascends to the KSCA throne

Shwetha by Shwetha
December 8, 2025
in ಕ್ರಿಕೆಟ್, Newsbeat, Sports, State, ಕ್ರೀಡೆ, ರಾಜ್ಯ
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಕೆಎಸ್‌ಸಿಎ ಆಡಳಿತದ ಶಕ್ತಿ ಕೇಂದ್ರವಾಗಿದ್ದ ಬ್ರಿಜೇಶ್ ಪಟೇಲ್ ಅವರ ಪ್ರಾಬಲ್ಯಕ್ಕೆ ಇದೀಗ ಅಧಿಕೃತವಾಗಿ ತೆರೆಬಿದ್ದಿದೆ. ತೀವ್ರ ಕುತೂಹಲ ಕೆರಳಿಸಿದ್ದ ಕೆಎಸ್‌ಸಿಎ ಚುನಾವಣೆಯಲ್ಲಿ ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಭರ್ಜರಿ ಜಯಗಳಿಸುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಗೆಲುವಿನೊಂದಿಗೆ ವೆಂಕಿ 12 ವರ್ಷಗಳ ಸುದೀರ್ಘ ಅಂತರದ ಬಳಿಕ ಮತ್ತೆ ಆಡಳಿತಾತ್ಮಕವಾಗಿ ಕೆಎಸ್‌ಸಿಎಗೆ ಮರಳಿದಂತಾಗಿದೆ.

ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರ ಬಲವಾದ ಬೆಂಬಲದೊಂದಿಗೆ ಕಣಕ್ಕಿಳಿದಿದ್ದ ವೆಂಕಟೇಶ್ ಪ್ರಸಾದ್ ಬಣ, ಬ್ರಿಜೇಶ್ ಪಟೇಲ್ ಬೆಂಬಲಿತ ಶಾಂತಕುಮಾರ್ ಬಣವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕರ್ನಾಟಕ ಕ್ರಿಕೆಟ್ ಆಡಳಿತದಲ್ಲಿ ಬದಲಾವಣೆಯ ಗಾಳಿ ಬೀಸಿದೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಡಿಸೆಂಬರ್ 07ರಂದು ನಡೆದ ಜಿದ್ದಾಜಿದ್ದಿನ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 1315 ಮತಗಳು ಚಲಾವಣೆಯಾಗಿದ್ದವು. ಅಧ್ಯಕ್ಷ ಸ್ಥಾನದ ಕಣದಲ್ಲಿದ್ದ ವೆಂಕಟೇಶ್ ಪ್ರಸಾದ್ ಅವರಿಗೆ ಒಟ್ಟು 749 ಮತಗಳು ದೊರೆತರೆ, ಪ್ರತಿಸ್ಪರ್ಧಿ ಶಾಂತಕುಮಾರ್ ಅವರಿಗೆ 558 ಮತಗಳು ಲಭ್ಯವಾದವು. ಅಂತಿಮವಾಗಿ 191 ಮತಗಳ ಅಂತರದಿಂದ ವೆಂಕಟೇಶ್ ಪ್ರಸಾದ್ ವಿಜಯಶಾಲಿಯಾದರು.

ಇನ್ನುಳಿದಂತೆ ವೆಂಕಿ ಬಣದ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಹಾಗೂ ಮಧುಕರ್ ಖಜಾಂಚಿಯಾಗಿ ಜಯಗಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಸ್ಪರ್ಧೆಯಲ್ಲಿ ಸಂತೋಷ್ ಮೆನನ್ ಗೆಲುವಿನ ನಗೆ ಬೀರಿದ್ದಾರೆ. ಆದರೆ, ಸಹಕಾರ್ಯದರ್ಶಿ ಸ್ಥಾನದಲ್ಲಿ ಮಾತ್ರ ಬ್ರಿಜೇಶ್ ಪಟೇಲ್ ಬಣದ ಬಿ.ಕೆ. ರವಿ ಗೆಲುವು ಸಾಧಿಸಿದ್ದು, ಎದುರಾಳಿ ಪಾಳಯದಿಂದ ಆಯ್ಕೆಯಾದ ಏಕೈಕ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.

ಪಟೇಲರ ಒಡ್ಡೋಲಗಕ್ಕೆ ಬಿತ್ತು ಬ್ರೇಕ್

ಕಳೆದ 22 ವರ್ಷಗಳಿಂದ ಕೆಎಸ್‌ಸಿಎ ಆಡಳಿತವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದ ಬ್ರಿಜೇಶ್ ಪಟೇಲ್ ಅವರಿಗೆ 2025ರ ಈ ಚುನಾವಣೆ ಕಹಿ ಅನುಭವ ನೀಡಿದೆ. ಆಡಳಿತದ ಚುಕ್ಕಾಣಿ ಹಿಡಿಯದಿದ್ದರೂ, ರಿಮೋಟ್ ಕಂಟ್ರೋಲ್ ಮೂಲಕ ಸಂಸ್ಥೆಯನ್ನು ನಿಯಂತ್ರಿಸುತ್ತಿದ್ದ ಪಟೇಲರ ತಂತ್ರಗಾರಿಕೆ ಈ ಬಾರಿ ಫಲಿಸಲಿಲ್ಲ. ಕುಂಬ್ಳೆಯ ಗೂಗ್ಲಿ, ಶ್ರೀನಾಥ್ ಅವರ ಬೌನ್ಸರ್ ಹಾಗೂ ವೆಂಕಿಯ ಸ್ವಿಂಗ್ ಎಸೆತಗಳಿಗೆ ಬ್ರಿಜೇಶ್ ಪಟೇಲರ ಬ್ಯಾಟಿಂಗ್ ವಿಫಲವಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

2010ರಲ್ಲಿ ಕುಂಬ್ಳೆ ಅಧ್ಯಕ್ಷರಾಗಿದ್ದ ಅವಧಿಯನ್ನು ಹೊರತುಪಡಿಸಿದರೆ, ಕಳೆದ ಎಂಟು ವರ್ಷಗಳಿಂದ ಪಟೇಲರ ಪಾರಮ್ಯಕ್ಕೆ ಎದುರಾಳಿಗಳೇ ಇರಲಿಲ್ಲ. ಆದರೆ ಕರ್ನಾಟಕ ಕ್ರಿಕೆಟ್ ನಿಧಾನವಾಗಿ ತನ್ನ ಘನತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕ ಹಾಗೂ ಆಡಳಿತದಲ್ಲಿ ಹೊಸತನದ ಅಗತ್ಯವನ್ನು ಮನಗಂಡ ಕುಂಬ್ಳೆ ಮತ್ತು ಶ್ರೀನಾಥ್ ಜೋಡಿ, ಈ ಬಾರಿ ವೆಂಕಟೇಶ್ ಪ್ರಸಾದ್ ಅವರನ್ನು ಮುಂದಿಟ್ಟುಕೊಂಡು ಚುನಾವಣಾ ಅಖಾಡಕ್ಕೆ ಧುಮುಕಿತ್ತು. ಅಂತಿಮವಾಗಿ ದಿಗ್ಗಜರ ಈ ನಡೆ ಯಶಸ್ವಿಯಾಗಿದೆ.

ಶಾಂತಕುಮಾರ್ ಬಲಿಯಾದ ಹರಕೆಯ ಕುರಿ

ಈ ಚುನಾವಣೆಯಲ್ಲಿ ಅತಂತ್ರ ಸ್ಥಿತಿಗೆ ಸಿಲುಕಿದವರು ಪರಾಜಿತ ಅಭ್ಯರ್ಥಿ ಶಾಂತಕುಮಾರ್. ಆರಂಭದಲ್ಲಿ ಅವರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆಯಾಗಿದ್ದರು. ಆದರೆ ಛಲ ಬಿಡದ ಶಾಂತಕುಮಾರ್ ನ್ಯಾಯಾಲಯದ ಮೊರೆ ಹೋಗಿ, ನಾಮಪತ್ರವನ್ನು ಸಿಂಧುಗೊಳಿಸಿಕೊಂಡು ಕಣಕ್ಕಿಳಿದಿದ್ದರು. ಉತ್ತಮ ಆಡಳಿತಗಾರ ಎಂಬ ಖ್ಯಾತಿ ಹೊಂದಿದ್ದರೂ, ಬ್ರಿಜೇಶ್ ಪಟೇಲ್ ಅವರ ನೆರಳಿನಲ್ಲಿ ನಿಂತಿದ್ದು ಶಾಂತಕುಮಾರ್ ಅವರಿಗೆ ಮುಳುವಾಯಿತು. ಪಟೇಲರ ಸಾಂಪ್ರದಾಯಿಕ ವೋಟ್ ಬ್ಯಾಂಕ್ ಕೈ ಹಿಡಿಯದ ಕಾರಣ, ಉತ್ತಮ ವರ್ಚಸ್ಸು ಹೊಂದಿದ್ದ ಶಾಂತಕುಮಾರ್ ಸೋಲೊಪ್ಪಿಕೊಳ್ಳಬೇಕಾಯಿತು.

ಗೆಲುವಿನ ಹಿಂದಿನ ಸೂತ್ರಧಾರ ವಿನಯ್ ಮೃತ್ಯುಂಜಯ್

ವೆಂಕಟೇಶ್ ಪ್ರಸಾದ್ ಅವರ ಗೆಲುವಿನ ಹಿಂದೆ ಕ್ರಿಕೆಟ್ ದಿಗ್ಗಜರ ಪ್ರಭಾವ ಎಷ್ಟಿದೆಯೋ, ಅಷ್ಟೇ ಪ್ರಮುಖ ಪಾತ್ರವನ್ನು ಲೆಕ್ಕಪರಿಶೋಧಕ ವಿನಯ್ ಮೃತ್ಯುಂಜಯ್ ವಹಿಸಿದ್ದಾರೆ. ಹಿಂದೆ ಮಹಾರಾಜರ ಕಾಲದಲ್ಲಿ ಮತ್ತು ನಂತರ ಬ್ರಿಜೇಶ್ ಪಟೇಲ್ ಬಣದಲ್ಲೂ ಗುರುತಿಸಿಕೊಂಡಿದ್ದ ವಿನಯ್, ಈ ಬಾರಿ ಪಟೇಲರ ವಿರುದ್ಧ ತಿರುಗಿಬಿದ್ದರು. ಕೆಎಸ್‌ಸಿಎ ಸದಸ್ಯರ ನಾಡಿಮಿಡಿತ ಅರಿತಿದ್ದ ಅವರು, ವೆಂಕಿ ಟೀಮ್ ಪರ ತೆರೆಮರೆಯ ರಣತಂತ್ರ ಹೆಣೆಯುವ ಮೂಲಕ ಪಟೇಲರ ಕೋಟೆಯನ್ನು ಒಡೆಯುವಲ್ಲಿ ಯಶಸ್ವಿಯಾದರು.

ಗೆಲುವು ಸಿಹಿಯಾಗಿದ್ದರೂ, ವೆಂಕಟೇಶ್ ಪ್ರಸಾದ್ ಅವರ ಮುಂದಿನ ಹಾದಿ ಸುಗಮವಾಗಿಲ್ಲ. ಕಳೆದ ಕೆಲ ವರ್ಷಗಳಿಂದ ಮಂಕಾಗಿರುವ ಕರ್ನಾಟಕ ಕ್ರಿಕೆಟ್‌ನ ಗತವೈಭವವನ್ನು ಮರುಕಳಿಸುವಂತೆ ಮಾಡುವುದು ಅವರ ಮುಂದಿರುವ ಮೊದಲ ಆದ್ಯತೆಯಾಗಬೇಕಿದೆ.

ಕೆಎಸ್‌ಸಿಎ ಕ್ಲಬ್ ಸದಸ್ಯರು ಮತ್ತು ಕ್ರಿಕೆಟ್ ಪ್ರೇಮಿಗಳು ಅಪಾರ ನಂಬಿಕೆಯಿಂದ ಕ್ರಿಕೆಟಿಗರ ಕೈಗೆ ಆಡಳಿತವನ್ನು ಒಪ್ಪಿಸಿದ್ದಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಆದ ಪ್ರಮಾದಗಳು ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ವೆಂಕಿ ಹೆಗಲ ಮೇಲಿದೆ. ಪ್ರತಿಷ್ಠೆ ಮತ್ತು ವೈಯಕ್ತಿಕ ಸ್ಥಾನಮಾನಗಳನ್ನು ಬದಿಗಿಟ್ಟು, ಅರ್ಹ ಕ್ರಿಕೆಟ್ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದು ಹೊಸ ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಒಟ್ಟಿನಲ್ಲಿ, 12 ವರ್ಷಗಳ ನಂತರದ ವಾಪಸಾತಿಯನ್ನು ವೆಂಕಟೇಶ್ ಪ್ರಸಾದ್ ಹೇಗೆ ಸದುಪಯೋಗಪಡಿಸಿಕೊಳ್ಳಲಿದ್ದಾರೆ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.

ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram