ಚಂದನವನದ ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ನಟ ಸುದೀಪ್ ಕಂಬನಿ ಮಿಡಿದಿದ್ದಾರೆ. ಅಲ್ಲದೇ, ದ್ವಾರಕೀಶ್ ಅಂತಿಮ ದರ್ಶನ ಪಡೆದಿದ್ದಾರೆ.
ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಗಾಗಿ ಚೆನ್ನೈನಲ್ಲಿದ್ದ ಸುದೀಪ್, ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ಕಿಚ್ಚ ಸುದೀಪ್ ವಿಷ್ಣುವರ್ಧನ್ ಸಿನಿಮಾವನ್ನು ದ್ವಾರಕೀಶ್ ಬ್ಯಾನರ್ ಅಡಿ ಮಾಡಿದ್ದರು. ಈ ಚಿತ್ರವು ದ್ವಾರಕೀಶ್ ಆರ್ಥಿಕವಾಗಿ ಸದೃಢವಾಗುವಂತೆ ಮಾಡಿತ್ತು.
ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ಹೇಳಿದ್ದಾರೆ. ಅಂತಿಮ ವಿಧಿ ವಿಧಾನಗಳು ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ನಡೆಯಲಿದೆ.
ದ್ವಾರಕೀಶ್ ನಿಧನಕ್ಕೆ ಇಡೀ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಪ್ರಧಾನಿ ಮೋದಿ ಆದಿಯಾಗಿ ಹಲವಾರು ರಂಗದಲ್ಲಿದ್ದವರು ಕೂಡ ಕಂಬನಿ ಮಿಡಿದಿದ್ದಾರೆ.