ಕನ್ನಡ ಚಿತ್ರರಂಗದ ಹಿರಿಯ ನಟ ಕೃಷ್ಣೇಗೌಡ ನಿಧನ Krishne Gowda
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅವರು ಇಂದು ನಿಧನರಾಗಿದ್ದಾರೆ.
ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ
ಇನ್ನು ಹಿರಿಯ ನಟ ಬಿ.ಎಂ.ಕೃಷ್ಣೇಗೌಡ ಅಗಲಿಕೆಗೆ ಕನ್ನಡ ಚಿತ್ರರಂಗದ ಗಣ್ಯರು, ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.









