ಹಿರಿಯ ನಟ ಸತ್ಯಜಿತ್ ಇನ್ನಿಲ್ಲ Satyajit saaksha tv
ಬೆಂಗಳೂರು : ಚಂದನವನದ ಹಿರಿಯ ನಟ ಸತ್ಯಜಿತ್ ವಿಧಿವಶರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸತ್ಯಜಿತ್ ಅವರು ಕೆಲ ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶನಿವಾರದ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಹುಬೇಡಿಕೆಯ ಪೋಷಕ ನಟರಾಗಿದ್ದ ಸತ್ಯಜಿತ್, ಇವರ ಮೂಲ ಹೆಸರು ಸಯ್ಯದ್ ನಿಜಾಮುದ್ದೀನ್.
650ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಅವರು ಒಂದು ಕಾಲದಲ್ಲಿ ಬಹುಬೇಡಿಕೆ ಪೋಷಕ ನಟರಾಗಿ ಗುರುತಿಸಿಕೊಂಡಿದ್ದರು.
ನೆಗೆಟಿವ್ ಪಾತ್ರ ಕೊಟ್ಟರೂ, ಅಷ್ಟೇ ಖಡಕ್ ಆಗಿ ಅಭಿನಯಿಸಿದ್ದರು.
ಇನ್ನು ಸತ್ಯಜಿತ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.