ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಹೃದಯಾಘಾತ..
ಕನ್ನಡದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಟ ಲೋಹಿತಾಶ್ವ ಅವರಿಗೆ ನಿನ್ನೆ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ನಟ ಲೋಹಿತಾಶ್ವ ಅವರು ಜನಪ್ರಿಯ ಖಳನಟ ಶರತ್ ಲೋಹಿತಾಶ್ವ ತಂದೆಯಾಗಿದ್ದಾರೆ.
Veteran Kannada actor T.S. Lohitashwa has a heart attack.