ನವದೆಹಲಿ: ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ (72) (Sitaram Yechury) ಇಹಲೋಕ ತ್ಯಜಿಸಿದ್ದಾರೆ.
ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಕೃತಕ ಉಸಿರಾಟದ ಬೆಂಬಲದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ತೀವ್ರ ನಿಗಾ ಇಟ್ಟಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಕೊನೆಯುಸಿರೆಳೆದಿದ್ದಾರೆ.
2015ರಲ್ಲಿ ಪ್ರಕಾಶ್ ಕಾರಟ್ ಅವರ ನಂತರ ಯೆಚೂರಿ ಸಿಪಿಎಂ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿದ್ದರು. ಲೋಕಸಭಾ ಸದಸ್ಯರಾಗಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ವಿಪಿ ಸಿಂಗ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.