ಮಂಗಳೂರು: ಮನೆಯೊಂದಕ್ಕೆ ದರೋಡೆಕೊರರು ನುಗ್ಗಿ ನಗ-ನಗದು ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.
ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ವಿಹೆಚ್‍ಪಿ ಮುಖಂಡ ನೂಜೆ ತುಕ್ರಪ್ಪ ಶೆಟ್ಟಿ ಎಂಬುವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಇಂದು ಬೆಳಗಿನ ಜಾವ ನುಗ್ಗಿದೆ. ಮನೆಯ ಯಜಮಾನ ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ನಗದು-ಆಭರಣ ದೋಚಿ ಪರಾರಿಯಾಗಿದೆ.
ದರೋಡೆಕೋರರ ತಂಡ ತುಕ್ರಪ್ಪ ಶೆಟ್ಟಿ ಮೇಲೆ ಹಲ್ಲೆ ಮಾಡಿ ಹಗ್ಗದಿಂದ ಕಟ್ಟಿಹಾಕಿದ್ದಲ್ಲದೆ, ಅವರ ಪತ್ನಿಗೆ ಚೂರಿಯಿಂದ ಹೊಟ್ಟೆಗೆ ಎರಡು ಬಾರಿ ಇರಿದಿದ್ದು, ತೀವ್ರ ಗಾಯಗಳಾಗಿವೆ.
ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದುದರಿಂದ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಡಕಾಯಿತರ ತಂಡ ಪರಾರಿಯಾಗಿದೆ. ಡಕಾಯಿತರು ತೆರಳುತ್ತಲೆ ಮನೆಯವರು ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ.
ಸ್ಥಳೀಯವಾಗಿ ವಿಶ್ವಹಿಂದೂ ಪರಿಷತ್ ನ ಕೊಕ್ಕಡ ವಲಯ ಅದ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಈ ದರೋಡೆಕೋರರು ನುಗ್ಗಿದ ವಿಷಯ ತಿಳಿಯುತ್ತಲೆ ನೂರಾರು ಮಂದಿ ಆಗಮಿಸಿದ್ದಾರೆ. ದರೋಡೆಕೋರರ ತಂಡದಲ್ಲಿ ಮನೆಯೊಳಗೆ ನುಗ್ಗಿದವರು ಅಂದಾಜು 9 ಮಂದಿಯಷ್ಟಿದ್ದು ದರೋಡೆ ನಡೆಸಿ ಪರಾರಿಯಾಗಬಹುದಾದ ಎಲ್ಲಾ ರಸ್ತೆಗಳನ್ನು ನಾಕಾಬಂದಿ ಹಾಕಿ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel