ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP yogeshwar) ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ (BJP) ಕಾಂಗ್ರೆಸ್ಗೆ (Congress) ಜಂಪ್ ಆಗಿದ್ದರೂ ಮತದಾರ ಮಾತ್ರ ಯೋಗೇಶ್ವರ್ ಅವರನ್ನು ಕೈ ಹಿಡಿದಿದ್ದಾರೆ.
ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಮತಗಳು ಬರುತ್ತಿದ್ದಂತೆ ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದರು. ಯೋಗೇಶ್ವರ್ ಕೊನೆಯವರೆಗೂ ಇದೇ ಮುನ್ನಡೆ ಕಾಯ್ದುಕೊಂಡು ಗೆಲುವಿನ ನಗೆ ಬೀರಿದ್ದಾರೆ.
ಯೋಗೇಶ್ವರ್ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡರು. 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕೈ ಹಿಡಿದವು. ಹೀಗಾಗಿ ಯೋಗೇಶ್ವರ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿದೆ.








