ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ನೀಟ್ ಕಿಚ್ಚಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಲಿ: ಕೊನೆಗೂ ರಾಜೀನಾಮೆ ನೀಡಿದ ಶಿಕ್ಷಣ ಸಚಿವ; ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕೆ ಬಿಗ್ ವಿಕ್ಟರಿ

Shwetha by Shwetha
July 26, 2026
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಕೊನೆಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿಕೆಟ್ ಪತನಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಜೆನ್ ಜೀ ಯುವಜನತೆ ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವುದಾಗಿ ತಿಳಿಸಿದ್ದಾರೆ.

Related posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

July 26, 2026
ಮೋದಿ ಸರ್ಕಾರಕ್ಕೆ ನಡುಕ ಹುಟ್ಟಿಸುತ್ತಾ ಸಿಜೆಪಿ? ಕಾಕ್ರೋಚ್ ಜನತಾ ಪಾರ್ಟಿ ಕುಂಡಲಿಯಲ್ಲಿ ಅಡಗಿದೆಯೇ ಅಧಿಕಾರ ಕಿತ್ತುಕೊಳ್ಳುವ ಶಕ್ತಿ!:ವೇಣು ಸ್ವಾಮಿ ಭವಿಷ್ಯದ ಬೆನ್ನಲ್ಲೇ ಮೋದಿ ಆಡಳಿತಕ್ಕೆ  ಶುರುವಾಯ್ತು ಟೆನ್ಷನ್!

ಮೋದಿ ಸರ್ಕಾರಕ್ಕೆ ನಡುಕ ಹುಟ್ಟಿಸುತ್ತಾ ಸಿಜೆಪಿ? ಕಾಕ್ರೋಚ್ ಜನತಾ ಪಾರ್ಟಿ ಕುಂಡಲಿಯಲ್ಲಿ ಅಡಗಿದೆಯೇ ಅಧಿಕಾರ ಕಿತ್ತುಕೊಳ್ಳುವ ಶಕ್ತಿ!:ವೇಣು ಸ್ವಾಮಿ ಭವಿಷ್ಯದ ಬೆನ್ನಲ್ಲೇ ಮೋದಿ ಆಡಳಿತಕ್ಕೆ ಶುರುವಾಯ್ತು ಟೆನ್ಷನ್!

July 26, 2026

ಮೊದಲ ದಿನವೇ ಜವಾಬ್ದಾರಿ ಒಪ್ಪಿಕೊಂಡಿದ್ದೆ

ತಮ್ಮ ಪೋಸ್ಟ್ ನಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಧರ್ಮೇಂದ್ರ ಪ್ರಧಾನ್, ನಾನು ಮೊದಲ ದಿನದಿಂದಲೇ ಪರೀಕ್ಷಾ ಅಕ್ರಮದ ಹೊಣೆಗಾರಿಕೆಯನ್ನು ಒಪ್ಪಿಕೊಂಡಿದ್ದೆ. ಪರಿಸ್ಥಿತಿಯಿಂದ ನಾನು ಎಂದಿಗೂ ಹಿಂದೆ ಸರಿದಿಲ್ಲ. ಪರೀಕ್ಷಾ ಮಾಫಿಯಾದಿಂದ ಯಾವುದೇ ಪ್ರತಿಭಾನ್ವಿತ ವಿದ್ಯಾರ್ಥಿಯ ಭವಿಷ್ಯ ಹಾಳಾಗಬಾರದು ಎನ್ನುವುದು ನನ್ನ ದೃಢ ನಿಶ್ಚಯವಾಗಿತ್ತು. ಕಳೆದ 10 ದಿನಗಳ ಘಟನೆಗಳು ನನಗೆ ತೀವ್ರ ದುಃಖ ತಂದಿವೆ. ಇದು ನನಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ, ಬದಲಾಗಿ ದೇಶದ ಯುವಶಕ್ತಿಯ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಹೇಳಿದ್ದಾರೆ.

ದೇಶವಿರೋಧಿ ಶಕ್ತಿಗಳಿಗೆ ಅವಕಾಶ ನೀಡಲ್ಲ

ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳನ್ನು ದೇಶವಿರೋಧಿ ಶಕ್ತಿಗಳು ಬಳಸಿಕೊಳ್ಳಲು ನಾನು ಬಿಡುವುದಿಲ್ಲ. ನಮ್ಮ ಮಕ್ಕಳು ಕಾನೂನು ತೊಡಕುಗಳಲ್ಲಿ ಸಿಲುಕುವ ಬದಲು ತಮ್ಮ ಅಧ್ಯಯನದತ್ತ ಗಮನಹರಿಸಬೇಕು. ದೇಶದ ಏಕತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪ್ರಧಾನ್ ವಿವರಿಸಿದ್ದಾರೆ.

ಮೇ 3 ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ದೃಢಪಟ್ಟ ತಕ್ಷಣ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿದೆ. ಅಕ್ರಮ ತಡೆಯಲು ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ನನಸಾಗಿಸುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ ಎಂದು ಅವರು ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ಇನ್ನು ಮುಂದೆ ಜಗನ್ನಾಥ ದೇವರ ಆಶೀರ್ವಾದದೊಂದಿಗೆ ಒಡಿಶಾದ ಜನರು ಮತ್ತು ದೇಶದ ಯುವಕರ ಸೇವೆಗೆ ನನ್ನನ್ನು ನಾನು ಅರ್ಪಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಶ್ರಮಿಸಿದ ಸಚಿವರು, ಈಗ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದು ಅಧಿಕಾರದಿಂದ ಕೆಳಗಿಳಿದಿರುವುದು ಕೇಂದ್ರ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿ ಕಂಡರೂ, ಹೋರಾಟ ನಿರತ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಸದ್ಯ ಧರ್ಮೇಂದ್ರ ಪ್ರಧಾನ್ ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ShareTweetSendShare
Join us on:

Related Posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

by Shwetha
July 26, 2026
0

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕೇವಲ ಅಲ್ಪ ಜಯ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಬಿ...

ಮೋದಿ ಸರ್ಕಾರಕ್ಕೆ ನಡುಕ ಹುಟ್ಟಿಸುತ್ತಾ ಸಿಜೆಪಿ? ಕಾಕ್ರೋಚ್ ಜನತಾ ಪಾರ್ಟಿ ಕುಂಡಲಿಯಲ್ಲಿ ಅಡಗಿದೆಯೇ ಅಧಿಕಾರ ಕಿತ್ತುಕೊಳ್ಳುವ ಶಕ್ತಿ!:ವೇಣು ಸ್ವಾಮಿ ಭವಿಷ್ಯದ ಬೆನ್ನಲ್ಲೇ ಮೋದಿ ಆಡಳಿತಕ್ಕೆ  ಶುರುವಾಯ್ತು ಟೆನ್ಷನ್!

ಮೋದಿ ಸರ್ಕಾರಕ್ಕೆ ನಡುಕ ಹುಟ್ಟಿಸುತ್ತಾ ಸಿಜೆಪಿ? ಕಾಕ್ರೋಚ್ ಜನತಾ ಪಾರ್ಟಿ ಕುಂಡಲಿಯಲ್ಲಿ ಅಡಗಿದೆಯೇ ಅಧಿಕಾರ ಕಿತ್ತುಕೊಳ್ಳುವ ಶಕ್ತಿ!:ವೇಣು ಸ್ವಾಮಿ ಭವಿಷ್ಯದ ಬೆನ್ನಲ್ಲೇ ಮೋದಿ ಆಡಳಿತಕ್ಕೆ ಶುರುವಾಯ್ತು ಟೆನ್ಷನ್!

by Shwetha
July 26, 2026
0

ನವದೆಹಲಿ: ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಸಿಡಿದೆದ್ದಿರುವ ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ನಡೆಸಿದ ನಿರಂತರ ಹೋರಾಟಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬಲಿಯಾಗಿದ್ದಾರೆ....

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

by Shwetha
July 26, 2026
0

ಬೆಂಗಳೂರು: ಬಿಜೆಪಿ ನಾಯಕ ಸಿ ಟಿ ರವಿ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನು ಉಲ್ಲಂಘಿಸುವವರಿಗೆ...

ಪ್ರತಿಭಟನಾಕಾರರಿಗೆ ಆಹಾರ ನೀಡಿದ್ದೇ ಅಪರಾಧವೇ?  ಮೀರತ್ ನಲ್ಲಿ ಸ್ವಯಂಸೇವಕ ಜುನೈದ್ ಕುಟುಂಬದ ಮೇಲೆ ಖಾಕಿ ದಬ್ಬಾಳಿಕೆ!

ಪ್ರತಿಭಟನಾಕಾರರಿಗೆ ಆಹಾರ ನೀಡಿದ್ದೇ ಅಪರಾಧವೇ? ಮೀರತ್ ನಲ್ಲಿ ಸ್ವಯಂಸೇವಕ ಜುನೈದ್ ಕುಟುಂಬದ ಮೇಲೆ ಖಾಕಿ ದಬ್ಬಾಳಿಕೆ!

by Shwetha
July 26, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿವಿಧ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಮಾನವೀಯತೆಯ ಆಧಾರದ ಮೇಲೆ ಆಹಾರ ಮತ್ತು ನೀರು ವಿತರಿಸುತ್ತಿದ್ದ ಸ್ವಯಂಸೇವಕರೊಬ್ಬರ ಕುಟುಂಬದ ಮೇಲೆ ಉತ್ತರ...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 26, 2026
0

ದಿನ ಭವಿಷ್ಯ- 26-07-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಲಿದೆ. ಸೂರ್ಯನ ಅನುಗ್ರಹದಿಂದ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram