ಬೆಂಗಳೂರು : ಕೊರೊನಾ ಹಿನ್ನೆಲೆ ರಾಜಕೀಯ ಪಕ್ಷಗಳು ಸೋಶಿಯಲ್ ಮೀಡಿಯಾ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ರಾಜಕೀಯ ಪಕ್ಷಗಳ ನಾಯಕರು ತಮ್ಮ ಕಾರ್ಯಕರ್ತರ ಸಂಪರ್ಕ ಸಾಧಿಸುತ್ತಿದ್ದಾರೆ. ಅದರಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ, ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ನಾಳೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಕುಮಾರಸ್ವಾಮಿ ಅವರು ಜೆಪಿ ನಗರದ ತಮ್ಮ ನಿವಾಸದಿಂದಲೇ ನಾಳೆ ಬೆಳಗ್ಗೆ 11.30ಕ್ಕೆ ಜೂಮ್ ಆಪ್ ಮೂಲಕ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಈ ವೇಳೆ ಕೋವಿಡ್ ಸ್ಥಿತಿಗತಿ ಹಾಗೂ ಪಕ್ಷ ಸಂಘಟನೆಯ ಕುರಿತು ಪಕ್ಷದ ಕಾರ್ಯಕರ್ತರ ಜೊತೆ ಹೆಚ್ ಡಿಕೆ ಚರ್ಚಿಸಲಿದ್ದಾರೆ.








