ವಿಧಾನ ಮಂಡಲ ಅಧಿವೇಶನಕ್ಕೆ ದಿನಾಂಕ ಫಿಕ್ಸ್
ಬೆಂಗಳೂರು : ಕೋವಿಡ್ ಹಾವಳಿ ನಡುವೆ ವಿಧಾನಸಭೆ ಅಧಿವೇಶನಕ್ಕೆ ದಿನಾಂಕವನ್ನ ಫಿಕ್ಸ್ ಮಾಡಲಾಗಿದೆ.. ಮುಂದಿನ ತಿಂಗಳು ಸೆಪ್ಟೆಂಬರ್ 13 ರಿಂದ 24 ರವರೆಗೂ ಬೆಂಗಳೂರಿನಲ್ಲಿ ಅಧಿವೇಶನ ನಡೆಯಲಿದೆ.. ಈ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ವಿಧಾನಸೌಧದಲ್ಲಿ ಇಂದು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮ ತೆಗೆದುಕೊಳ್ಳಲಾಗಿದೆ.. ವಿಧಾನಸಭಾ ಅಧಿವೇಶದ ದಿನಾಂಕ ನಿಗದಿಯಾಗಿರುವ ಬಗ್ಗೆ ಕಾನೂನು ಮತ್ತು ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
SSLC ಪೂರಕ ಪರೀಕ್ಷೆಗೆ ದಿನಾಂಕ ನಿಗದಿ
ಇನ್ನೂ ಇಂದು ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ.. ಪ್ರಮುಖವಾಗಿ 2859 ಆರೋಗ್ಯ ಉಪಕೇಂದ್ರಗಳನ್ನ ಮೇಲ್ದರ್ಜೆಗೇರಿಸಲು 478 ಕೋಟಿ. ರೂ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಸ್ಟೇಟ್ ಮೆಂಟಲ್ ಹೆಲ್ತ್ ಕಾಯ್ದೆ ಜಾರಿಗೆತೀರ್ಮಾನ ಮಾಡಲಾಗಿದ್ದು, ಇನ್ನೂ ಹಲವಾರು ಯೋಜನೆಗಳ ಬಗ್ಗೆ ಪ್ರಮುಖ ನಿರ್ಧಾಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ರು.