ಮೈಸೂರು: ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
36 ವರ್ಷದ ಸಿಬ್ಬಂದಿ ಶೀತ-ಕೆಮ್ಮು ಸೇರಿದಂತೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ಕೋವಿಡ್-19 ಪಾಸಿಟಿವ್ ಬಂದಿತ್ತು.
ನಂತರ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಧಾನಸೌಧದ ಆರ್‍ಡಿಪಿಆರ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ನೌಕರನ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.