ಇತ್ತೀಚೆಗೆ ಮಾಲಿವುಡ್ ನ ನಟ , ನಿರ್ಮಾಪಕನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.. ಸಿನಿಮಾದಲ್ಲಿ ಅವಕಾಶ ಕೊಡಿಸೋ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ವಿಜಯ್ ಬಾಬು ಅವರ ಮೇಲಿದೆ..
ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
ಯುವತಿ ಕೋಝಿಕೋಡ್ ನಿವಾಸಿಯಾಗಿದ್ದು, ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ.. ಇದೀಗ ವಿಜಯ್ ಬಾಬು ಪಾಸ್‌ಪೋರ್ಟ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಟ್ಟುಗೋಲು ಹಾಕಿದೆ. ಪಾಸ್‌ಪೋರ್ಟ್ ಕೂಡ ಜಪ್ತಿ ಆಗಿರುವುದರಿಂದ ವಿಜಯ್ ಬಾಬು ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರದ ಪೊಲೀಸ್ ಆಯುಕ್ತ ಸಿ.ಎಚ್ ನಾಗರಾಜು ತಿಳಿಸಿದ್ದಾರೆ.
ಕೊಚ್ಚಿ ನಗರ ಪೊಲೀಸರ ಮನವಿಯ ಮೇರೆಗೆ ಆರೋಪಿ ವಿಜಯ್ ಬಾಬು ಅವರ ಪಾಸ್ ಪೋರ್ಟ್ ಅನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಪ್ತಿ ಮಾಡಿದೆ. ವಿಜಯ್ ಬಾಬು ಹೆಸರಿನಲ್ಲಿರುವ ಎಲ್ಲಾ ದೇಶದ ವೀಸಾಗಳು ಈಗ ಅಮಾನ್ಯವಾಗಿದೆ.
ಅವರು ಬೇರೆ ದೇಶಕ್ಕೆ ಹೋಗುವ ಸೂಚನೆಯಿದೆ.. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ವಿಜಯ್ ವಿರುದ್ಧ ನ್ಯಾಯಾಲಯದ ವಾರೆಂಟ್ ಇದೆ ಎಂದು ತಿಳಿದು ಬಂದಿದೆ.
ವಿಜಯ್ ಬಾಬು ಪಾಸ್‌ಪೋರ್ಟ್ ಜಪ್ತಿ ಹಿನ್ನೆಲೆ ಮೇ.24 ರಂದು ವಿಜಯ್ ಬಾಬು ಕಚೇರಿಗೆ ಹಾಜರಾಗದಿದ್ದರೆ , ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಕೆಲಸದ ವೇಳೆ ವಿಜಯ್ ನನಗೆ ಬಲವಂತವಾಗಿ ಕಿಸ್ ಮಾಡಲು ಮುಂದಾಗಿದ್ದಾಗಿ ಮಹಿಳೆಯೊಬ್ಬರು ಬಹಿರಂಗವಾಗಿ ಮಾತನಾಡಿದ್ದಾರೆ.
ವಿಜಯ್ ಬಾಬು ಯಾವಾಗಲೂ ವಿಪರೀತ ಕುಡಿಯುತ್ತಾರೆ. ಅಂದು ನನಗೂ ಅವರು ಕುಡಿಯುವಂತೆ ಆಫರ್ ಮಾಡಿದರು. ನಾನು ಒಪ್ಪಲಿಲ್ಲ. ಅವರು ಕಂಠಪೂರ ಕುಡಿದದಿದ್ದರು. ಏಕಾಏಕಿ ನನಗೆ ಮುತ್ತಿಡಲು ಬಂದರು. ನಾನು ಅವರನ್ನು ದೂರ ತಳ್ಳಿದೆ. ಕೇವಲ ಒಂದೇ ಒಂದು ಕಿಸ್ ಎಂದು ಬೇಡಿಕೆ ಇಟ್ಟರು. ನಾನು ನಿರಾಕರಿಸಿ ಅಲ್ಲಿಂದ ತಪ್ಪಿಸಿಕೊಂಡು ಬಂದೆ ಎಂದು ಹೇಳಿದ್ದಾರೆ..
ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ವಿಜಯ್ ಬಾಬು, ಈವರೆಗೂ ಪೊಲೀಸರಿಗೆ ಸಿಕ್ಕಿಲ್ಲ. ವಿದೇಶದಲ್ಲಿ ಅದದ್ರಲ್ಲೂ ದುಬೈನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.