ಹೊಸ ಚಿತ್ರ ಘೋಷಣೆ ವಿಜಯ್ ದೇವರಕೊಂಡ, ಕೀರ್ತಿ ಸುರೇಶ್ ಜೊತೆ ವಿಜಯ್ ದೇವರಕೊಂಡ (Vijay Deverakonda), ರವಿ ಕಿರಣ್ ಕೋಲ ನಿರ್ದೇಶನ ರೌಡಿ ಜನಾರ್ದನ್, ತೆಲುಗು ಪುಟಾಯ್, ತೆಲುಗು ಆಕ್ಷನ್‑ಡ್ರಾಮಾ ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.
ಹೈದರಾಬಾದ್‌ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು.
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ವಾರು ರಾಣಿ ಗಾರು ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕ್ಟ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಇದನ್ನೂ ಓದಿ: ಉತ್ತರ ಕರ್ನಾಟಕದ ರಂಗಭೂಮಿ ಮೌನ: ನಗೆಯ ದೊರೆ ರಾಜು ತಾಳಿಕೋಟೆ ಇನ್ನಿಲ್ಲ
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ.
ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16 ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಸ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








