ನಟ ವಿಜಯ್ ದೇವರಕೊಂಡ ತಮ್ಮ ಡೇಟಿಂಗ್ ಕುರಿತ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಆ ಮೂಲಕ ತಮ್ಮ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ, ನನಗೆ 35 ವರ್ಷ. ನಾನು ಇನ್ನೂ ಒಂಟಿಯಾಗಿದ್ದೇನೆ ಎಂದು ನೀವು ಭಾವಿಸುತ್ತೀರಾ? ಎಂದು ಪ್ರಶ್ನಿಸಿರುವ ವಿಜಯ್, ಡೇಟಿಂಗ್ ಹಾಗೂ ಸಂಬಂಧಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನಾನು ಬಹಳ ದಿನಗಳಿಂದ ಪರಿಚಯವಿರುವ ಕೋಸ್ಟಾರ್ ಜೊತೆಗೆ ಡೇಟಿಂಗ್ ಮಾಡುತ್ತಿದ್ದೇನೆ ಎಂದು ವಿಜಯ್, ಡೇಟಿಂಗ್ ಕುರಿತ ವದಂತಿಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಡೇಟಿಂಗ್ ಸಂಬಂಧದ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿದ್ದವು. ಕೆಲವೊಮ್ಮೆ ಮಾಧ್ಯಮಗಳು ಅವರು ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿದ್ದರೂ, ಅವರು ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿರಲಿಲ್ಲ. ಆದರೆ ವಿಜಯ್ ಕೊನೆಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರು ಬಹಳ ದಿನಗಳಿಂದ ಪರಿಚಯವಿರುವ ಕೋಸ್ಟಾರ್ ಜೊತೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿದರೂ, ಮಾಧ್ಯಮಗಳಲ್ಲಿ ಚರ್ಚೆಗಳು ಮುಂದುವರಿದಿದೆ.