National : ಬಹುಕೋಟಿ ವಂಚನೆ ಪ್ರಕರಣ , ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ…!!!
ನವದೆಹಲಿ : ಭಾರತೀಯ ಬ್ಯಾಂಕಿಗೆ 9 ಸಾವಿರ ಕೋಟಿಗೂ ಅಧಿಕ ಸಾಲ ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಯುಯು ಲಲಿತ್ , ಎಸ್. ರವೀಂದ್ರ ಭಟ್ ಮತ್ತು ಪಿ.ಎಸ್. ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಲಕ್ಷ ರೂಪಾಯಿ ವರ್ಗಾಯಿಸಿದ್ದಕ್ಕಾಗಿ ಮಲ್ಯ ಅವರು 2017ರ ತೀರ್ಪನ್ನು ಮರುಪರಿಶೀಲಿಸುವಂತೆ ಮಾಡಿದ ಮನವಿಯನ್ನು 2020ರಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ವಿಜಯ್ ಮಲ್ಯ 2016ರಿಂದ ಬ್ರಿಟನ್‌ನಲ್ಲಿದ್ದಾರೆ.








