ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಕಡಲ ತೀರದ ಭಾರ್ಗವ” ಚಿತ್ರದ “ಸಮಯವೆ” ಹಾಡು 

1 min read
Vijay Prakash saaksha tv

ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ “ಕಡಲ ತೀರದ ಭಾರ್ಗವ” ಚಿತ್ರದ “ಸಮಯವೆ” ಹಾಡು  Vijay Prakash saaksha tv

 ವಿಭಿನ್ನ ಕಥಾಹಂದರ ಹೊಂದಿರುವ “ಕಡಲ ತೀರದ ಭಾರ್ಗವ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ “ಸಮಯವೆ” ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡು ಎ ಆರ್ ಪಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಅನಿಲ್ ಸಿ.ಜೆ ಸಂಗೀತ ನೀಡಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

ಚಿತ್ರದ ನಾಯಕರಲ್ಲೊಬ್ಬರಾದ ಭರತ್ ಅವರನ್ನು ಪರಿಚಯಯಿಸುವ ಗೀತೆಯಾಗಿ ಈ ಹಾಡು ಮೂಡಿಬಂದಿದೆ.

ಸದ್ಯದಲ್ಲೇ ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಲಿದ್ದು, ಜನವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ.

ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ಈ ಚಿತ್ರದ ನಿರ್ಮಾಪಕರು. ವಿಜಯಂ ವಜ್ರ ವೆಂಕ್ಚರ್ಸ್ ಸಹ ನಿರ್ಮಾಣ ಈ ಚಿತ್ರಕ್ಕಿದೆ.

Vijay Prakash saaksha tv

ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗೂ ಅಭಿನಯಿಸಿದ್ದಾರೆ.

ಶೃತಿ ಪ್ರಕಾಶ್ ಈ ಚಿತ್ರದ ನಾಯಕಿ. ಈಟಿವಿ ಶ್ರೀಧರ್, ರಾಘವ್ ನಾಗ್ , ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಬೆಂಗಳೂರು, ಉಡುಪಿ, ಮುರುಡೇಶ್ವರ ಹಾಗೂ ಇನ್ನಿತರ ಕರಾವಳಿಯ ಕಡಲತೀರಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.

ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ, ಕೀರ್ತನ್ ಪೂಜಾರ್ ಛಾಯಾಗ್ರಹಣ ಹಾಗೂ ಆಶಿಕ್ ಕುಸುಗೊಳ್ಳಿ , ಉಮೇಶ್ ಭೋಸಗಿ ಅವರ ಸಂಕಲನವಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd