ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ (Darshan) ಜೈಲಿನಲ್ಲಿದ್ದಾರೆ. ಈ ಮಧ್ಯೆ ಪತ್ನಿ ವಿಜಯಲಕ್ಷ್ಮೀ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವುದಕ್ಕಾಗಿ ತೆರಳಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಜಯಲಕ್ಷ್ಮೀ ಅವರು ಪತಿ ದರ್ಶನ್ ಭೇಟಿ ಮಾಡಲು ಆಗಾಗ ಜೈಲಿಗೆ ತೆರಳುತ್ತಿದ್ದಾರೆ. ಪತಿಯನ್ನು ಕಾನೂನಿನಿಂದ ತಪ್ಪಿಸಲು ವಿಜಯಲಕ್ಷ್ಮೀ ಟೊಂಕ ಕಟ್ಟಿ ನಿಂತಿದ್ದಾರೆ. ಹೀಗಾಗಿಯೇ ದರ್ಶನ್ ಪ್ರಕರಣದ ಕುರಿತು ಮಾತನಾಡಲು ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಜೊತೆ ತೆರಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್‌ಗೆ ಅನ್ಯಾಯ ಆಗಿದೆಯಾ ಹೇಗೆ ಎಂಬೆಲ್ಲ ಪ್ರಶ್ನೆಗಳನ್ನು ಡಿಕೆಶಿ ಕೇಳಿದ್ದಾರೆ ಎನ್ನಲಾಗಿದೆ.








