ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ರನ್ನು (Darshan) ನೋಡಲು 2ನೇ ಬಾರಿಗೆ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.
ಸೆ. 5ರಂದು ಪತ್ನಿ ವಿಜಯಲಕ್ಷ್ಮಿ (Vijaylakshmi) ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದು, ದರ್ಶನ್ ರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಮುಂದಿನ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಚಾರ್ಜ್‌ಶೀಟ್ ಸಲ್ಲಿಕೆಯ ನಂತರ ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿಹೈ ಸೆಕ್ಯೂರಿಟಿ ಸೆಲ್‌ನಿಂದ ಹೊರಬಂದ ಆರೋಪಿ ದರ್ಶನ್ ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ.
ಈ ಸಂದರ್ಭದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಕಾಲಾವಕಾಶ ನೀಡಲಾಗಿತ್ತು.