ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಜೈಲು ಪಾಲಾಗಿದ್ದಾರೆ. ಅವರೊಂದಿಗೆ ಅವರ ಗ್ಯಾಂಗ್ ಕೂಡ ಜೈಲಿನಲ್ಲಿ ಕಂಬಿ ಎಣಿಸುತ್ತಿದೆ. ಈ ಮಧ್ಯೆ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ಗಾಗಿ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ದೇವರ ಮೊರೆ ಹೋಗಿದ್ದಾರೆ. ದೇವಸ್ಥಾನಗಳಿಗೆ ಸುತ್ತಿ ಶಕ್ತಿ ದೇವರನ್ನು ಪ್ರಾರ್ಥಿಸುತ್ತಿದ್ದಾರೆ.
ಪತಿ ದರ್ಶನ್ ಬಿಡುಗಡೆಗಾಗಿ ಪತ್ನಿ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಭಾನುವಾರ ಭೀಮನ ಅಮವಾಸ್ಯೆ ಇದ್ದ ಹಿನ್ನೆಲೆಯಲ್ಲಿ ನಗರದ ಬನಶಂಕರಿ ದೇವಸ್ಥಾನಕ್ಕೆ ಸ್ನೇಹಿತೆ ಜೊತೆ ಭೇಟಿ ನೀಡಿದ್ದು, ವಿಜಯಲಕ್ಷ್ಮಿ ಸಂಕಲ್ಪ ಪೂಜೆ ಮಾಡಿಸಿದ್ದಾರೆ. ವಿಜಯಲಕ್ಷ್ಮೀ ಅವರು ದೇವಿಯ ದರ್ಶನ ಪಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಕಳೆದ ವಾರವಷ್ಟೇ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ನವ ಚಂಡಿಕಾ ಯಾಗ ಮಾಡಿಸಿದ್ದರು. ಅಂದೇ ದಿನಕರ್ ತೂಗುದೀಪ್ ಕೂಡ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದರು. ಈಗ ಮತ್ತೆ ಬನಶಂಕರಿಯ ಮೊರೆ ಹೋಗಿದ್ದಾರೆ.