ನೂತನ ವಿಜಯನಗರ ಜಿಲ್ಲೆಗೆ ಆರು ತಾಲೂಕು ಸೇರ್ಪಡೆ
ಬೆಂಗಳೂರು : ಭಾರಿ ವಿರೋಧದ ನಡುವೆ ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ನೂತನ ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ.

ಸದ್ಯ ಬಳ್ಳಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಮಂಗಳೂರಿನಲ್ಲಿ ಶಾಂತಿ ಕದಡುವ ಯತ್ನ : ಗೋಡೆ ಮೇಲೆ `ಲಷ್ಕರ್ ಜಿಂದಾಬಾದ್’ ಬರಹ
ವಿಜಯನಗರ ಜಿಲ್ಲೆಗೆ ಆರು ತಾಲೂಕುಗಳನ್ನು ಸೇರ್ಪಡೆ ಮಾಡಿದ ಬಳಿಕ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಾಧುಸ್ವಾಮಿ, ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಸೇರಿ ಒಟ್ಟು 6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಹೇಳಿದರು. ಮೇವಿಗಾಗಿ ನಿತ್ಯ ಪರದಾಟ: ಆನೆ ಕಾರಿಡಾರ್ ನಲ್ಲಿ ಕಾಡಾನೆಗಳ ಅಡ್ಡಾದಿಡ್ಡಿ ಓಡಾಟ..!
ಇನ್ನು ಬಳ್ಳಾರಿ ಜಲ್ಲೆ ವಿಭಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ನಿನ್ನೆ ವಿವಿಧ ಸಂಘಟನೆಗಳು ಬಳ್ಳಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









