Vijayananda : ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಇಂದು ತೆರೆಗೆ
ಕನ್ನಡದ ಮೊದಲ ಬಯೋಪಿಕ್ ‘ವಿಜಯಾನಂದ’ ಇಂದು ವಿಶ್ವದ 1200 ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ.
ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ್ ಅವರ ಜೀವನವನ್ನು ಆಧರಿಸಿ ತಯಾರಾಗಿರುವ ‘ವಿಜಯಾನಂದ’ ಚಿತ್ರವು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
1976ರಲ್ಲಿ ಟ್ರಕ್ ಉದ್ಯಮ ಆರಂಭಿಸಿ ಇಂದು ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್ಎಲ್ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರು ನಡೆದು ಬಂದ ದಾರಿಯ ಕತೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.
ಟ್ರೈಲರ್ನಿಂದಲೇ ಕ್ರೇಜ್ ಹುಟ್ಟಿಸಿರೋ ‘ವಿಜಯಾನಂದ’ ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಎಲ್ಲ ಭಾಷೆಗಳ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
Vijayananda: The first Kannada biopic ‘Vijayananda’ will hit the screens today