Vijayapura | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಬಿಜಾಪುರ ನಿಧನ
ವಿಜಯಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸೀಮಸಾಬ ಹುಸೇನಸಾಬ ಬಿಜಾಪುರ (88) ನಿಧನರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ವಯೋ ಸಹಜ ಕಾಯಿಲೆಯಿಂದ ಕಾಹು ಬಿಜಾಪುರ ಅವರು ಕೊನೆಯುಸಿರೆಳೆದಿದ್ದಾರೆ.
ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಕಾಹು ಎಂದೇ ಹೆಸರುವಾಸಿಯಾಗಿರುವ ಕಾಸೀಮಸಾಬ ಹುಸೇನಸಾಬ ಬಿಜಾಪುರ ಅವರು, 1935 ಫೆಬ್ರವರಿ 4 ರಂದು ಜನಸಿದ್ದರು.

ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕಾಸೀಮಸಾಬ ಹುಸೇನಸಾಬ ಬಿಜಾಪುರ ಅವರು 2003 ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು.
ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಜನಪ್ರತಿನಿಧಿಗಳಿಂದ ತೀವ್ರ ಸಂತಾಪ ಸೂಚಿಸಿದ್ದಾರೆ.








