Vijayapura : ಶಾಸಕರ ಭರ್ಜರಿ ಡಾನ್ಸ್ ವಿಡಿಯೋ ವೈರಲ್
ವಿಜಯಪುರ : ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು ಮುದ್ದೇಬಿಹಾಳ ಮತಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಶಾಸಕ ಎ ಎಸ್ ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜನರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.
75ನೇ ಸ್ವಾತಂತ್ರ್ಯ ವರ್ಷದ ಅಮೃತಮಹೋತ್ಸವ ಹಿನ್ನೆಲೆ ಯುವಜನ ಸಂಕಲ್ಪ ನಡಿಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಈ ನಡೆಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಭಾಗವಹಿಸಿದ್ದಾರೆ.
ಮಾಜಿ ಸೈನಿಕರು, ಮಹಿಳೆಯರು, ಅಧಿಕಾರಿಗಳು, ಸರ್ಕಾರಿ ಸಿಬ್ಬಂದಿ ಸೇರಿ ಸಾವಿರಕ್ಕೂ ಅಧಿಕ ಜನ ನಡಿಗೆಯಲ್ಲಿ ಭಾಗಿಯಾಗಿದ್ದಾರೆ.
ಆಲಮಟ್ಟಿಯ ಹರ್ಡೇಕರ್ ಮಂಜಪ್ಪ ಸ್ಮಾರಕದಿಂದ ಶುರುವಾಗಿ ತಾಳಿಕೋಟಿಯಲ್ಲಿ ಯುವಜನ ಸಂಕಲ್ಪ ನಡಿಗೆ ಮುಕ್ತಾಯಗೊಂಡಿದೆ.