ನವದೆಹಲಿ: ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಳ್ಳಿ ಹಾಕಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷ ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದರ ಹೊರತಾಗಿ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿಯಾದ ಬಗ್ಗೆಯೂ ಅನಗತ್ಯ ಉಹಾಪೋಹ ಬೇಡ. ಕುಮಾರಸ್ವಾಮಿ ಪ್ರತಿಪಕ್ಷದ ನಾಯಕರಲ್ಲಿ ಒಬ್ಬರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಬಂದಿದ್ದರು ಎಂದು ಬಿಎಸ್‍ವೈ ಹೇಳಿದ್ದಾರೆ.
ಇದಕ್ಕೂ ಮೊದಲು, ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 120 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜ್ಯದ ರಾಯಭಾರಿ ಕಚೇರಿ ಎಂದೇ ಬಣ್ಣಿಸಲಾಗಿರುವ `ಕರ್ನಾಟಕ ಭವನ-1 ಕಾವೇರಿ’ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಎರಡು ತಳ ಮಹಡಿ, ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡ ಒಟ್ಟು 9 ಮಹಡಿಗಳ ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಮೆ; ಬಾಲಾಜಿ ಕೃಪಾ ಪ್ರಾಜೆಕ್ಟ್ ಕಂಪನಿಗೆ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಿಎಸ್‍ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ
ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...








