ಬಸನಗೌಡಗೆ ಕೈ ಟಿಕೆಟ್ : ಕಾಂಗ್ರೆಸ್ ಗೆ ನಾಚಿಕೆಯಾಗಬೇಕು ಎಂದ ವಿಜಯೇಂದ್ರ
ಬೆಂಗಳೂರು : ಮಸ್ಕಿ ಕ್ಷೇತ್ರದಲ್ಲಿ ಕಳೆದ ವಿಧಾನ ಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಂಡಿದ್ದ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಮಸ್ಕಿ ಉಪಚುನಾವಣೆಯಲ್ಲಿ ಅವರಿಗೇ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ.
ಜೆಡಿಎಸ್ ತೊರೆಯುವ ಬಗ್ಗೆ ಜಿ.ಟಿ.ದೇವೇಗೌಡ ಸ್ಪಷ್ಟನೆ
ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿ, ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಗೆ ಅಭ್ಯರ್ಥಿಯೇ ಸಿಕ್ಕಿಲ್ಲ ಎಂದ್ರೆ ನಾಚಿಕೆಗೇಡು ಎಂದು ಕುಟುಕಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ. ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಗೆ ಅಭ್ಯರ್ಥಿಯೇ ಸಿಕ್ಕಿಲ್ಲ ಎಂದ್ರೆ ನಾಚಿಕೆಗೇಡು.
ಮಸ್ಕಿಯಲ್ಲಿ ಕಾಂಗ್ರೆಸ್ ಯಾರನ್ನೇ ಅಭ್ಯರ್ಥಿಯನ್ನಾಗಿ ನಿಲ್ಲಿಸಿದರೂ ಆ ಕ್ಷೇತ್ರವನ್ನ ಹೇಗೆ ಗೆಲ್ಲಬೇಕೆಂಬ ತಂತ್ರವನ್ನ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಾಜಿ ಮಹಾರಾಜರು ಕೂಡ ಕನ್ನಡಿಗರೇ : ಗೋವಿಂದ ಕಾರಜೋಳ
ಇನ್ನು ರಾಜ್ಯಾಧ್ಯಕ್ಷರು ಬಸವ ಕಲ್ಯಾಣ ಕ್ಷೇತ್ರದಲ್ಲಿ ಸಂಘಟನೆ ಮಾಡಲು ಸೂಚಿಸಿದ್ದಾರೆ. ಭಗವಂತ್ ಖೂಬಾ ಮತ್ತು ನಾನು ಬಸವಕಲ್ಯಾಣದಲ್ಲಿ ಕೆಲಸ ಮಾಡುತ್ತೇವೆ. ಅಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ.
ಭಗವಂತ್ ಖೂಬಾ ಅವರು ಕಳೆದ ಬಾರಿ ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪರಾಭವಗೊಂಡಿದ್ದರು.
ಈ ಬಾರಿಯೂ ಬಿಜೆಪಿ ಟಿಕೆಟ್ ಗೆ ಪ್ರಯತ್ನ ಮಾಡಿದ್ದಾರೆ. ಆದ್ರೆ ಬಿ.ವೈ. ವಿಜಯೇಂದ್ರ ಅವರೇ ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಆಗುತ್ತಾರೆಂಬ ವದಂತಿಗಳು ಪಕ್ಷದಲ್ಲಿ ಹರಿದಾಡುತ್ತಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel