ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು ಕಾಣಿಸುತ್ತಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸನ್ನದ್ಧವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ.
ವರದಿಗಳ ಪ್ರಕಾರ, ವಿಸಿಕೆ, ಸಿಪಿಐ ಮತ್ತು ಸಿಪಿಎಂ ಪಕ್ಷಗಳು ಟಿವಿಕೆಗೆ ಬೆಂಬಲ ನೀಡಲು ಒಪ್ಪಿಕೊಂಡಿವೆ ಎನ್ನಲಾಗಿದೆ.
ಇದರೊಂದಿಗೆ ಕಾಂಗ್ರೆಸ್ ಪಕ್ಷದ 5 ಸ್ಥಾನಗಳು ಹಾಗೂ ಈ ಮೂರು ಪಕ್ಷಗಳ ಬೆಂಬಲ ಸೇರಿ ಒಟ್ಟು 118 ಶಾಸಕರ ಬೆಂಬಲ ವಿಜಯ್‌ಗೆ ಲಭ್ಯವಾಗಬಹುದು ಎಂದು ಹೇಳಲಾಗುತ್ತಿದೆ.
ಈ ಬೆಳವಣಿಗೆಗಳ ನಡುವೆಯಲ್ಲಿ, ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.







