ಸ್ನೇಹಿತನ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ
ಚಿಕ್ಕಮಗಳೂರು : ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರಕ್ಕೆ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಸಿದ್ದತೆ ನಡೆಸಲಾಗುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ವಿಜಯ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ವಿಜಯ್ ಅವರ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರದ ನಡೆಯಲಿದೆ.
ಲಿಂಗಾಯತ ಸಮುದಾಯದ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ನಡೆಯಲಿದ್ದು, ಕುಪ್ಪೂರು ಮಠದ ಮಠಾಧೀಶರ ನೇತೃತ್ವದಲ್ಲಿ ವಿಧಿ ವಿಧಾನಗಳು ನಡೆಯಲಿದೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಇದೇ ತೋಟದಲ್ಲಿ ವಿಜಯ್ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.