ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ನಗರ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್.ಹರ್ಷ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆಯ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಕಾಸ್ ಕುಮಾರ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ರಾಜ್ಯ ಸರ್ಕಾರ ನಿಯೋಜನೆ ಮಾಡಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇಂದು ವಿಕಾಶ್ ಕುಮಾರ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು.
ವಿಕಾಸ್ ಕುಮಾರ್ ಈ ಹಿಂದೆ ಚಿಕ್ಕಮಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ, ನಕ್ಸಲ್ ನಿಗ್ರಹದಳದ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.