‘ವಿಕ್ರಾಂತ್ ರೋಣ’ನ ಜೊತೆ ‘ರಕ್ಕಮ್ಮ’ಳಾಗಿ ಬಂದ ಲಂಕಾ ಸುಂದರಿ..!
ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಟಾಪ್ 1 ನಲ್ಲಿ ಟ್ರೆಂಡ್ ಆಗ್ತಿರುವ0 ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಾಕಷ್ಟು ಸುದ್ದಿಗಳಿಂದ ಚರ್ಚೆಯಲ್ಲಿದೆ.. ಇದೀಗ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸಿರುವುದರಿಂದ ಸಿನಿಮಾ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.. ಈ ನಡುವೆ ಜಾಕ್ವೆಲಿನ್ ಫಸ್ಟ್ ಲುಕ್ ಮೋಷನ್ ಪೋಸ್ಟರ್ ರಿಲೀಸ್ ಮಾಉವ ಮೂಲಕ ಲಂಕಾ ಸುಂದರಿಯ ಪಾತ್ರದ ಪರಿಚಯ ಮಾಡಿಕೊಟ್ಟಿದೆ ಸಿನಿಮಾ ತಂಡ.
ಸಿನಿಮಾದ ವಿಶೇಷ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಕೆಲ ದಿನಗಳ ಹಿಂದಷ್ಟೇ ಶೂಟಿಂಗ್ ಮುಗಿಸಿದ್ದಾರೆ. ಸುದೀಪ್ ಜೊತೆ ಸ್ಟೈಲಿಷ್ ಅವತಾರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳಕಿಸಿದರು. ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್ ಮತ್ತು ಜಾಕ್ವೆಲಿನ್ ಕೆಮಿಸ್ಟ್ರಿಯ ಫೋಟೋಗಳು ಸಖತ್ ಸೌಂಡ್ ಮಾಡಿತ್ತು. ಇದೀಗ ವಿಕ್ರಾಂತ್ ರೋಣ ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಪಾತ್ರದ ಫಸ್ಟ್ ಲುಕ್ ಅನಾವರಣ ಆಗಿದೆ.
ಚಿತ್ರತಂಡ ಹೇಳಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ಕಿಚ್ಚನ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡೊಂದಕ್ಕೆ ಹೆಜ್ಜೆ ಹಾಕಲು ಬಂದ ನಟಿ ಆಮೇಲೆ ವಿಶೇಷ ಪಾತ್ರದಲ್ಲು ನಟಿಸಿರುವುದರಿಂದ ಸಹಜವಾಗಿ ಜಾಕ್ವೆಲಿನ್ ಮೇಲೆ ಕುತೂಹಲ ಹೆಚ್ಚಿದೆ. ಅದು ಅಲ್ಲದೇ ನಟನೆಗಾಗಿ ಕನ್ನಡವನ್ನೂ ಕಲಿತಿದ್ದಾರೆ ಅನ್ನುವ ವಿಚಾರವೂ ಇತ್ತೀಚೆಗಷ್ಟೇ ಗೊತ್ತಾಗಿತ್ತು.
“ಬಲವಂತವಾಗಿ ಕಿಸ್ ಮಾಡಲು ಬಂದ್ರು, ಹೆದರಿ ಬಾತ್ ರೂಮ್ ನಲ್ಲಿ ಬಚ್ಚಿಟ್ಟುಕೊಂಡಿದ್ದೆ” – ಕುಂದ್ರಾ ವಿರುದ್ಧ ಶರ್ಲಿನ್ ಆರೋಪ
ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಪೋಸ್ಟರ್ ರಿಲೀಸ್ ಆಗಿದೆ. ‘ಗದಂಗ್ ರಕ್ಕಮ್ಮ’ ಎಂಬ ರಗಡ್ ಪಾತ್ರದಲ್ಲಿ ಜಾಕ್ವೆಲಿನ್ ನಟಿಸುತ್ತಿದ್ದು, ಸ್ಯಾಂಡಲ್ಈ ಹಾಡು ಸಖತ್ ಕಿಕ್ನಿಂದ ಕೂಡಿರಲಿದೆ ಅನ್ನೋದು ಗೊತ್ತಾಗ್ತಿದೆ. ವಿಕ್ರಾಂತ್ ರೋಣ ಚಿತ್ರದ ಚಿತ್ರೀಕರಣಕ್ಕಾಗಿ ನಟಿ ಜಾಕ್ವೆಲಿನ್ ಬೆಂಗಳೂರಿಗೆ ಬಂದಿದ್ದರು. ಜುಲೈ ಮೂರನೇ ವಾರದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಸಾಂಗ್ ಶೂಟಿಂಗ್ ಮುಗಿದ ಮೇಲೆ ಸುದೀಪ್ ಸಹ ಬಾಲಿವುಡ್ ಬ್ಯೂಟಿಗೆ ಥ್ಯಾಂಕ್ಸ್ ಹೇಳಿದ್ದರು. ನಮ್ಮ ಸಿನಿಮಾದ ಹಾಡಿಗೆ ಜೋಶ್ ತುಂಬಿದ್ದಕ್ಕೆ ಧನ್ಯವಾದ ಜಾಕ್ವೆಲಿನ್ ಫರ್ನಾಂಡೀಸ್. ನಿಮ್ಮ ನೃತ್ಯ ನನ್ನನ್ನೂ ಒಂದೆರಡು ಸ್ಟೆಪ್ ಹಾಕುವಂತೆ ಪ್ರೇರೇಪಿಸಿತು. ನಿಮಗೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದರು.
ಸಿನಿಮಾದಲ್ಲಿ ಕಿಚ್ಚ ಸುದೀಪ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಈ ಚಿತ್ರಕ್ಕೆ ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ನಿರ್ಮಾಪಕ ಜಾಕ್ ಮಂಜು ಅವರು ಬಂಡವಾಳ ಹೂಡಿದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸ ನಡೆಯುತ್ತಿದೆ.