ಬೆಂಗಳೂರು: ಡಿಸೆಂಬರ್ 22, 27ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕೈಪಡೆ ಕಾರ್ಯತಂತ್ರ ರೂಪಿಸಿದೆ.
ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಮಾಡಲು, ಪಂಚಾಯ್ತಿ ಹಾಗೂ ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ ಅದಕ್ಕೆ “ಪ್ರಜಾ ಪ್ರತಿನಿಧಿ” ಎಂದು ಹೆಸರಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅನುಷ್ಠಾನಕ್ಕೆ ತರಲು ತಯಾರಿ ನಡೆಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಹಿರಿಯ ಮುಖಂಡರ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತಂತೆ ಸುದೀರ್ಘ ಚರ್ಚೆ ನಡೆದಿದೆ. ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಸಭೆಯಲ್ಲಿ ಆದ ತೀರ್ಮಾನಗಳ ವಿವರ ನೀಡಿದರು.
ಗ್ರಾಮ ಪಂಚಾಯ್ತಿ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಚುನಾವಣಾ ಆಯೋಗ ನಿರ್ಧಾರವನ್ನು ಕಾಂಗ್ರೆಸ್ ಸ್ವಾಗತಿದೆ. ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಮಾಡಲು, ಪಂಚಾಯ್ತಿ ಹಾಗೂ ಬೂತ್ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು. ಅದಕ್ಕೆ “ಪ್ರಜಾ ಪ್ರತಿನಿಧಿ” ಅಂತಾ ಹೆಸರಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇದನ್ನು ಅನುಷ್ಠಾನಕ್ಕೆ ತರಲು ತಯಾರಿ ನಡೆಸಲಾಗುತ್ತಿದೆ ಎಂದರು.
ಸ್ಥಳೀಯರಿಗೆ ಮುಂದಿನ ಎಲೆಕ್ಷನ್ನಲ್ಲಿ ಆದ್ಯತೆ
ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಮಾಡಿದ್ದೇವೆ. ಮುಂದಿನ ಚುನಾವಣೆಗಳಲ್ಲಿ ಎಚ್ಚೆತ್ತುಕೊಂಡು ಸ್ಥಳೀಯ ನಾಯಕರಿಗೆ ಆದ್ಯತೆ ನೀಡಲಿದ್ದೇವೆ. ಇದಕ್ಕಾಗಿ ಸಮಿತಿ ರಚಿಸಿದ್ದು, ಅವರ ಸಲಹೆ ಮೇರೆಗೆ ಅಭ್ಯರ್ಥಿ ಆಯ್ಕೆ ಮಾಡಿ ಹೈಕಮಾಂಡ್ಗೆ ಹೆಸರು ಶಿಫಾರಸ್ಸು ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ನಾಯಕರು ಸೇರಿದಂತೆ 9 ತಂಡಗಳನ್ನು ರಚನೆ ಮಾಡುತ್ತಿದ್ದು, ಅವರು ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರವಾಸ ಮಾಡಲಿದ್ದಾರೆ. ಅದರ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ರಾಜ್ಯ ಸರ್ಕಾರದ ತಪ್ಪುಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಸಿ, ಜನರ ಕೈಗೇ ಅಧಿಕಾರ ನೀಡಲು ನಮ್ಮದೇ ಆದ ಪ್ರಯತ್ನ ಮಾಡುತ್ತೇವೆ ಎಂದರು.
ಪಕ್ಷದ ಸಂಘಟನೆಗಾಗಿ ಸಾಂಸ್ಕøತಿಕ, ಚಾಲಕರ ಹಾಗೂ ಸಹಕಾರ ಸಂಘ ಘಟಕಗಳನ್ನು ರಚನೆ ಮಾಡಲಿದ್ದು, ಪಂಚಾಯ್ತಿ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಈ ಘಟಕಗಳು ಆರಂಭವಾಗಲಿವೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಜನಪರ ಹೋರಾಟದ ಪರವಾಗಿ ಕಾಂಗ್ರೆಸ್ ನಿಲ್ಲುತ್ತದೆ. ರೈತರನ್ನು ಉಳಿಸಲು ನಮ್ಮ ಹೋರಾಟ ಮಾಡುತ್ತೇವೆ. ಕೂಡಲೇ ಕೇಂದ್ರ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿ, ಎಲ್ಲ ರೈತಮಾರಕ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಆಗ್ರಹ ಮಾಡುತ್ತೇವೆ ಎಂದು ಡಿಕೆಶಿ ವಿವರ ನೀಡಿದರು.
ಹಿಂದುತ್ವ ಯಾರ ಆಸ್ತಿಯೂ ಅಲ್ಲ..!
ಹಿಂದುತ್ವ ಯಾರ ಆಸ್ತಿಯೂ ಅಲ್ಲ. ಭಾರತದ ಪರಂಪರೆ, ಸಂಸ್ಕೃತಿ ನಮ್ಮ ಆಸ್ತಿ. ಮಹಾತ್ಮ ಗಾಂಧೀಜಿ, ವಿವೇಕಾನಂದರ ಹಿಂದುತ್ವ ವಾದದ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು, ಈ ಬಗ್ಗೆ ಮುಂದೆ ಮಾತನಾಡುತ್ತೇನೆ. ಸಂವಿಧಾನ ಉಳಿಸೋದು ನಮ್ಮ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ದೊಡ್ಡವರು, ಅವರು ಏನು ಬೇಕಾದರೂ ಹೇಳಲಿ. ಅವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ.
ಬಿಜೆಪಿ ಶಾಸಕ ಸಿದ್ದು ಸವದಿ ಅವರ ಕ್ಷೇತ್ರದಲ್ಲಿ ಹೆಣ್ಣು ಮಗಳೊಬ್ಬಳ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಸಿಎಂ ಅವರಾಗಲಿ, ಪೆÇಲೀಸ್ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಅಲ್ಲಿಗೇ ಭೇಟಿ ಕೊಟ್ಟು ಆ ಹೆಣ್ಣಿನ ಪರವಾಗಿ ನಿಲ್ಲುತ್ತೇವೆ. ಮಹಿಳೆ ಮೇಲೆ ದೌರ್ಜನ್ಯ ನಡೆಸಿದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್, ಉಪಮುಖ್ಯಸ್ಥ ವಿ.ಆರ್. ಸುದರ್ಶನ್ ಹಾಜರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








