ಬೆಂಗಳೂರು : ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಸಲು 18 ರಂದು ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ತಡರಾತ್ರಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
29 ರಂದು ನಡೆಯುವ ದ್ವೈವಾರ್ಷಿಕ ಚುನಾವಣಗೆ ಬಿಜೆಪಿ ಅಭ್ಯರ್ಥಿಗಳಾಗಿ ಮಾಜಿ ಸಚಿವ ಎಂಟಿಬಿ ನಾಗರಾಜ್, ಆರ್.ಶಂಕರ್ ಸುನೀಲ್ ವಲ್ಯಾಪುರೆ, ಹಾಗೂ ಪ್ರತಾಪ್ ಸಿಂಹ ನಾಯಕ್ ಕಣಕ್ಕಿಳಿದ್ದಾರೆ.ವಿಧಾನ ಪರಿಷತ್ ಚುನಾವಣೆ ಟಿಕೆಟ್ ಪಡೆಯಬೇಕೆಂದು ಫೈಟ್ ಮಾಡಿದ್ದ ಹಳ್ಳಿ ಹೆಚ್ ವಿಶ್ವನಾಥ್ ಕನಸು ಭಗ್ನಗೊಂಡಿದೆ. ಅವರಿಗೆ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಟಿಕೆಟ್ ನೀಡಿಲ್ಲ.
ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ಹೆಚ್. ವಿಶ್ವನಾಥ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಆದರೆ ಪತನದ ಕಾರ್ಯದಲ್ಲಿ ಭಾಗಿಯಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ಬಿಜೆಪಿ ಮಣೆ ಹಾಕಿದೆ. ಆ ಮೂಲಕ ಹೆಚ್ ವಿಶ್ವನಾಥ್ ಕನಸಿಗೆ ಬಿಜೆಪಿ ನೀರು ಎರಚಿದೆ.








