ಮೈಸೂರು: ಕಲುಷಿತ ನೀರು (Contaminated water) ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಸುಮಾರು 25ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಹುಣಸೂರು (Hunasuru) ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ (Jal Jeevan Mission) ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಮನೆಗಳಿಗೆ ನೀರು ಪೂರೈಸುವ ಪೈಪ್ ಹಾನಿಯಾಗಿದೆ.
ಹೀಗಾಗಿ ಪೈಪ್ ನಲ್ಲಿ ಕಲುಷಿತ ನೀರು ಸೇರಿಕೊಂಡಿದೆ. ಇದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.