ಪ್ರಚಾರಕ್ಕೆ ಬಂದ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ತರಾಟೆ
ಚಿಕ್ಕಮಗಳೂರು : ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪ್ರಚಾರಕ್ಕೆ ತೆರಳಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮೂಡಿಗೆತೆ ಜಾಂಬಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ಜಾಂಬಳೆ ಗ್ರಾಮಸ್ಥರು ಮೊಬೈಲ್ ನೆಟ್ ವರ್ಕ್ ಸಮಸ್ಯೆ ಬಗೆಹರಿಸುವ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪ್ರಶ್ನೆ ಮಾಡಿದ್ರು.
‘ಹಳ್ಳಿ ಹಕ್ಕಿ’ಗೆ ಗಾಳ ಹಾಕಿತೇ ‘ಬಿಗ್ ಬಾಸ್’ : ದೊಡ್ಮನೆಗೆ ಎಂಟ್ರಿಯಾಗ್ತಾರಾ..!
ಈ ವೇಳೆ ಗ್ರಾಮಸ್ಥರ ಪ್ರಶ್ನೆಗೆ ಸಂಸದೆ ಸರಿಯಾಗಿ ಉತ್ತರ ನೀಡುವಲ್ಲಿ ವಿಫಲರಾದರು. ಇದರಿಂದ ರೊಚ್ಚಿಗೆದ್ದ ಜನರು ಸಂಸದೆಯನ್ನು ತರಾಟೆಗೆ ತೆಗೆದುಕೊಂಡರು.
ಹಲವು ವರ್ಷಗಳಿಂದ ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ಜನರು ನೆಟ್‍ವರ್ಕ್ ಸಮಸ್ಯೆ ಎದುರಿಸುತ್ತಿದ್ದಾರೆ.
ಶಾಲಾ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನಡೆಯುತ್ತಿದ್ದು, ಸರಿಯಾದ ನೆಟ್ ವರ್ಕ್ ಇಲ್ಲದೇ ಸರಿಯಾದ ಶಿಕ್ಷಣ ದೊರಕುತ್ತಿಲ್ಲ.
ಈ ಸಮಸ್ಯೆ ಬಗೆಹರಿಸಿ ಎಂದು ಗ್ರಾಮಸ್ಥರು ಸಂಸದೆ ಬಳಿ ಮನವಿ ಮಾಡಿದಾಗ ಮಾತಿಗೆ ಮಾತು ಬೆಳೆದು ಶೋಭಾ ಕರಂದ್ಲಾಜೆ ಅವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel