ವಿನಯ್ ಕುಲಕರ್ಣಿಗೆ ಮತ್ತೆ 14ದಿನ ಜೈಲು ಫಿಕ್ಸ್
ಧಾರವಾಡ : ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ನ್ಯಾಯಾಲಯದಲ್ಲಿ ಇಂದು ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಚಾರಣೆ ನಡೆಯಿತು.
ವಿನಯ್ ಕುಲಕರ್ಣಿ ಅವರು ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಡಿ. 7ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. ಬೆಂಬಲ ಬೆಲೆ ನಿಮ್ಮಪ್ಪನ ಮನೆಯಿಂದ ಕೊಡ್ತೀಯಾ: ಸಿಎಂ ವಿರುದ್ಧ ಸಿದ್ದು ಘರ್ಜನೆ
ಮತ್ತೊಂದು ಕಡೆ ಯೋಗೇಶ್ ಗೌಡ ಹತ್ಯೆಯಾದಾಗ ತನಿಖಾಧಿಕಾರಿಯಾಗಿದ್ದ ಉಪನಗರ ಠಾಣೆಯ ಇನ್ಸ್ ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನವೆಂಬರ್ 30 ಕ್ಕೆ ಮುಂದೂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel