ವಾಷಿಂಗ್ಟನ್: ಅಮೆರಿಕದ ಭಾರತದ ರಾಯಭಾರಿಯಾಗಿ (Indian Ambassador) ವಿನಯ್ ಮೋಹನ್ ಕ್ವಾತ್ರಾ (Vinay Mohan Kwatra) ಅಧಿಕಾರ ಸ್ವೀಕರಿಸಿದ್ದಾರೆ.
61 ವರ್ಷದ ಕ್ವಾತ್ರಾ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary)ಯೇ ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿ ಕೆಲಸ ನಿರ್ವಹಿಸಿದ್ದರು. ನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆದರೆ, ಅವರು ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು.
ಕ್ವಾತ್ರಾ ಅವರು ತರಂಜಿತ್ ಸಿಂಗ್ ಸಂಧು ಅವರ ಉತ್ತರಾಧಿಕಾರಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ವಿದೇಶಿ ಸೇವೆಯಿಂದ ನಿವೃತ್ತರಾದ ಕ್ವಾತ್ರಾ 2020 ರಿಂದ 2024ರ ಅವಧಿಗೆ ಯುಎಸ್ ನಲ್ಲಿ (US) ಭಾರತದ ಉನ್ನತ ರಾಜತಾಂತ್ರಿಕರಾಗಿ ಸೇವೆ ಮಾಡಿದ್ದರು. ಈಗ ಅಮೆರಿಕದಲ್ಲಿ ಭಾರತದ ನೂತನ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ನಡುವೆ ಅಮೆರಿಕಗೆ ಭಾರತದ ಹೊಸ ರಾಯಭಾರಿಯಾಗಿ ಕ್ವಾತ್ರಾರನ್ನು ಸ್ವಾಗತಿಸಲು ಸಂತೋಷವಾಗಿದೆ ಎಂದು ಚಾರ್ಜ್ ಡಿ ಅಫೇರ್ಸ್ ಶ್ರೀಪ್ರಿಯಾ ರಂಗನಾಥನ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಹೊಸ ಭಾರತೀಯ ರಾಯಭಾರಿಯನ್ನು ಸ್ವಾಗತಿಸಲು ಗ್ರೇಟರ್ ವಾಷಿಂಗ್ಟನ್ ಡಿಸಿ ಪ್ರದೇಶದ ಭಾರತೀಯ ಅಮೆರಿಕನ್ನರ ಗುಂಪು ಡಲ್ಲೆಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿತ್ತು.