ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ – ಬೀಗ ಮುರಿದಿರುವ ಖದೀಮರು…
ಕನ್ನಡ ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ನಟಿಸುತ್ತಿರುವ ಹಿರಿಯ ನಟಿ ವಿನಯ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಯ ಬಾಗಿಲು ಮುರಿದಿರುವ ಕಳ್ಳರು ನಗದು ಮತ್ತು ಬೆಲೆ ಬಾಳುವ ವಸ್ತಗಳನ್ನ ದೋಚಿಕೊಂಡು ಹೋಗಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ಹಿರಿಯ ನಟಿ ವಿನಯ ಪ್ರಸಾದ್ ಅವರ ಕುಟುಂಬ ಹುಟ್ಟುರು ಉಡುಪಿಗೆ ಹಬ್ಬಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ್ದನ್ನ ಗಮನಿಸಿ ಕಳ್ಳರು ಮನೆ ಬೀಗ ಮುರಿದು ನಗದು ಚೋಚಿದ್ದಾರೆ.
ವಿನಯ ಪ್ರಸಾದ್ ಕುಟುಂಬ ಹಬ್ಬ ಮುಗಿಸಿ ನಂದಿನಿ ಲೇಔಟ್ನಲ್ಲಿರುವ (Nandini Layout) ತಮ್ಮ ಮನೆಗೆ ಬಂದಾಗ ಕಳ್ಳತನ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಕಳ್ಳತನ ಸಂಬಂಧ ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಳ್ಳರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ದೀಪಾವಳಿ ಹಬ್ಬದ ದಿನವೇ ಉತ್ತರ ವಿಭಾಗದ ನಾಲ್ಕೈದು ಠಾಣಾ ವ್ಯಾಪ್ತಿಯಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಜೆಸಿ ನಗರ, ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಖದೀಮರು ತಮ್ಮಕೈಚಳಕ ತೋರಿಸಿದ್ದಾರೆ.
ದೀಪಾವಾಳಿಯ ಪಟಾಕಿ ಹಬ್ಬದ ಸದ್ದಿನಲ್ಲಿ ಬೀಗ ಮುರಿಯ ಶಬ್ದ ಹೊರ ಬರದಂತೆ ಕಳ್ಳರು ಕರಾಮತ್ತು ತೋರಿಸಿದ್ದಾರೆ.
vinaya prasad : Theft at actress Vinaya Prasad’s house