ಸಂಕಷ್ಟದಲ್ಲಿದ್ದೇನೆ… ಸಯಾಯಮಾಡಿ ಎಂದಿದ್ದ ವಿಜಯಲಕ್ಷ್ಮಿಗೆ ನೆರವಾದ ಲೀಲಾವತಿ , ವಿನೋದ್ ರಾಜ್
ಬೆಂಗಳೂರು: ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ… ನಾನು ಕನ್ನಡದವಳೆಂದು ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ ಎಂದು ಬಹುಭಾಷಾ ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದರು . ಜೊತೆಗೆ ವೀಡಿಯೋ ಮಾಡಿ ಮಾತನಾಡಿರುವ ವಿಜಯಲಕ್ಷ್ಮಿ, ಕೊರೊನಾ ಸಂದರ್ಭದಲ್ಲಿ ಅಕ್ಕ ಉಷಾ ಅವರ ಆರೋಗ್ಯದಲ್ಲಿ ತುಂಬಾ ಏರುಪೇರಾಗಿದೆ. ಅವರಿಗೆ ಚಿಕಿತ್ಸೆ ಕೊಡಿಸಲು ನನ್ನಿಂದ ಆಗುತ್ತಿಲ್ಲ. ಯಾವುದೇ ನಟರು ಸಹ ಸಹಾಯಕ್ಕೆ ಬರುತ್ತಿಲ್ಲ. ನನ್ನ ಸಹೋದರಿ ಚಿಕಿತ್ಸೆಗೆ ಸಹಾಯ ಮಾಡಿ ನಟ ಶಿವಣ್ಣ, ದರ್ಶನ್, ಪುನೀತ್, ಯಶ್ ಸೇರಿದಂತೆ ಕನ್ನಡ ಚಿತ್ರರಂಗ ಹಾಗೂ ಕನ್ನಡ ಅಭಿಮಾನಿಗಳು ನೆರವು ನೀಡಿ ಎಂದು ಕೇಳಿಕೊಂಡಿದ್ದರು. ಉಷಾದೇವಿ ಗರ್ಭಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಯ ಸ್ಥಿತಿ ಬಹಳ ಗಂಭೀರವಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದು ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದರು. ಇದೀಗ ಸ್ಯಾoಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಅವರು ವಿಜಯಲಕ್ಷ್ಮಿಯ ಕಷ್ಟಕ್ಕೆ ಸ್ಪಂದಿಸಿ ನೆರವಾಗಿದ್ದಾರೆ.. ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಈ ಬಗ್ಗೆ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದು, ವಿನೋದ್ ರಾಜ್ಗೆ ಧನ್ಯವಾದ ಅರ್ಪಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








