ಸಚಿವರ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ

1 min read
Violation of Covid's Law in the Minister's Program saaksha tv

ಮಾಸ್ಕ್ ಇಲ್ಲ… ಅಂತರ ಇಲ್ಲ : ಸಚಿವರ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ Violation of Covid’s Law in the Minister’s Program saaksha tv 

ಕೋಲಾರ : ಕೋವಿಡ್ ನಿಯಮಗಳು ಜನರಿಗೆ ಮಾತ್ರನಾ..? ಸಚಿವರಿಗೆ ಅಧಿಕಾರಿಗಳಿಗೆ ಕೋವಿಡ್ ನಿಯಮಗಳು ಅನ್ವಯಿಸೋದಿಲ್ಲವಾ…? ಎಂಬ ಸದ್ಯ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ. ಆದ್ರೆ ಸಚಿವರ ಕಾರ್ಯಕ್ರಮದಲ್ಲಿಯೇ ಕೋವಿಡ್ ನಿಯಮಗಳ ಉಲ್ಲಂಘನೆಯಾಗುತ್ತಿದೆ.

ಕೋಲಾರ ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ೧ ಲಕ್ಷ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Violation of Covid's Law in the Minister's Program saaksha tv

ಈ ಕಾರ್ಯಕ್ರಮದಲ್ಲಿ ಸಚಿವ ಮುನಿರತ್ನ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸಚಿವ ವರ್ತೂರು ಪ್ರಕಾಶ್, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಆದ್ರೆ ಕಾರ್ಯಕ್ರಮದಲ್ಲಿ ಮಾತ್ರ ಯಾವುದೇ ಕೋವಿಡ್ ನಿಯಮಗಳನ್ನು ಪಾಲಿಸಿಯೇ ಇಲ್ಲ.

ಕೋವಿಡ್ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿತ್ತು. ಇದು ಸಾರ್ವಜನಿಕವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd