ವಿದ್ಯಾರ್ಥಿನಿ ಅನುಮಾನಾಸ್ಮದ ಸಾವು – ಶಾಲಾ ವಾಹನಗಳಿಗೆ ಬೆಂಕಿ ಹಂಚಿ ಆಕ್ರೋಶ…
ತಮಿಳುನಾಡಿನ ಕಲ್ಲಕುರಿಚಿಯಲ್ಲಿ 12ನೇ ತರಗತಿ ವಿದ್ಯಾರ್ಥಿಯ ಸಾವಿಗೆ ಸಂಬಂಧಿಸಿದಂತೆ ಭಾನುವಾರ ಹಿಂಸಾಚಾರ ಭುಗಿಲೆದ್ದಿದೆ. ವಿದ್ಯಾರ್ಥಿನಿ ಸಾವಿನಿಂದ ಕುಪಿತಗೊಂಡ ಜನರು ದೊಡ್ಡ ಸಂಖ್ಯೆಯಲ್ಲಿ ಶಾಲೆಗೆ ನುಗ್ಗಿ ಶಾಲಾ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ವಿದ್ಯಾರ್ಥಿನಿ ಸಾವನ್ನಪ್ಪಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿರು. ಮೊದಲು ಗುಂಪನ್ನ ಚದುರಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ರಾಜ್ಯ ಡಿಜಿಪಿ ಸಿ ಶೈಲೇಂದ್ರ ಬಾಬು ಹೇಳಿದ್ದಾರೆ. ಇಡೀ ಪ್ರದೇಶದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ‘ಮೊದಲು ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು, ನಂತರ ದಾಳಿ ಆರಂಭಿಸಿದರು. ಶಾಲೆಯ ಮೇಲೆ ದಾಳಿ ಮಾಡಿದ ಯಾವುದೇ ಆರೋಪಿಗಳನ್ನು ಬಿಡುವುದಿಲ್ಲ ಡಿಜಿಪಿ ಸಿ ಶೈಲೇಂದ್ರ ಬಾಬು ಹೇಳಿದ್ದಾರೆ.
#WATCH Tamil Nadu | Violence broke out in Kallakurichi with protesters entering a school, setting buses ablaze, vandalizing school property as they sought justice over the death of a Class 12 girl pic.twitter.com/gntDjuC2Zx
— ANI (@ANI) July 17, 2022
ಜುಲೈ 13 ರಂದು ವಿದ್ಯಾರ್ಥಿ ಸಾವು…
ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿ ಜುಲೈ 13 ರಂದು ಶವವಾಗಿ ಪತ್ತೆಯಾಗಿದ್ದಳು. ಹಾಸ್ಟೆಲ್ನ ಮೂರನೇ ಮಹಡಿಯಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಬಾಲಕಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಕೆ ಸಾಯುವ ಮುನ್ನ ಆಕೆಯ ದೇಹದ ಮೇಲೆ ಗಾಯದ ಗುರುತುಗಳಿದ್ದವು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿದ್ಯಾರ್ಥಿನಿ ಸಾವಿನ ನಂತರ ಆಕೆಯ ಕುಟುಂಬಸ್ಥರು, ಸಂಬಂಧಿಕರು ಮತ್ತು ಆಕೆಯ ಗ್ರಾಮದ ಪೆರಿವನಸಲೂರು ಜನರು ನ್ಯಾಯಕ್ಕಾಗಿ ಒತ್ತಾಯಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಸಿಬಿಸಿಐಡಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.