ಕರ್ತವ್ಯದ ನಡುವೆ ಕೋಳಿ ಮೊಟ್ಟೆ ಕದ್ದ ಪೊಲೀಸಪ್ಪ – ಕಳ್ಳತನದ ವಿಡಿಯೋ ವೈರಲ್
ಚಂಡೀಗಡ : ಪಂಜಾಬ್ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ತಮ್ಮ ವರದಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿದ್ದು, ಇದೀಗ ಅಮಾನತಾಗಿದ್ದಾರೆ. ಹೌದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸೈಕಲಿನಲ್ಲಿದ್ದ ಕೋಳಿಯ ಮೊಟ್ಟೆಗಳನ್ನು ಹೆಡ್ ಪಿಸಿ ಕಳ್ಳತನ ಮಾಡಿದ್ದಾರೆ. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮೊಟ್ಟೆ ಕಳ್ಳತನ ಮಾಡಿರುವ ಪೊಲೀಸರ ಹೆಸರು ಪ್ರೀತ್ಪಾಲ್ ಸಿಂಗ್.ಇವರು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಸೈಕಲ್ ವೊಂದರಲ್ಲಿಡಲಾಗಿದ್ದ ಮೊಟ್ಟೆಗಳನ್ನು ಎಗರಿಸಿ, ತನ್ನ ಪ್ಯಾಂಟ್ ಜೇಬಿನಲ್ಲಿ ಹಾಕಿಕೊಂಡಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಈ ರೀತಿಯಾದ ವರ್ತನೆಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ಧಾರೆ.
ಪ್ರೀತ್ಪಾಲ್ ಸಿಂಗ್ ಮೊಟ್ಟೆ ಕಳ್ಳತನದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಇದು ಪಂಜಾಬ್ ಪೊಲೀಸ್ ಇಲಾಖೆಯ ಗಮನಕ್ಕೂ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಿಸಿ ಪ್ರೀತ್ಪಾಲ್ ಸಿಂಗ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
https://twitter.com/i/status/1393479406291591169
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








