ಮಾಸ್ಕ್ ಧರಿಸದ್ದಕ್ಕೆ ಮಹಿಳೆಯನ್ನು ನಡು ರಸ್ತೆಯಲ್ಲೇ ಎಳೆದಾಡಿದ ಪೊಲೀಸರು –VIDEO VIRAL
ಮಧ್ಯಪ್ರದೇಶ : ಕೊರೊನಾ 2ನೇ ಅಲೆ ನಡುವೆ ಟಫ್ ರೂಲ್ಸ್ ಜಾರಿಗೆ ಬಂದಿದೆ.. ಮಾಸ್ಕ್ ಕಡ್ಡಾಯವಾಗಿ ಧರಿಸಲೇ ಬೇಕು.. ಇಲ್ಲದೇ ಇದ್ದರೆ ಪೊಲೀಸರು ಫೈನ್ ಹಾಕಬಹುದು.. ಆದ್ರೆ ಕೆಲವೆಡೆ ಪೊಲೀಸರು ಮಾಸ್ಕ್ ಧರಿಸದ್ದನ್ನೇ ನೆಪವಾಗಿಟ್ಟುಕೊಂಡು ದರ್ಪ ಮೆರೆದಿರುವ ಹಲವು ಘಟನೆಗಳು ಬೆಳಕಿಗೆ ಬಮದಿವೆ.. ಇದೀಗ ಮಹಿಳೆಯೊಬ್ಬರು ಮಾಸ್ಕ್ ಧರಿಸದಕ್ಕೆ ಪೊಲೀಸರು ಅವರನ್ನ ರಸ್ತೆಯಲ್ಲಿ ಹಿಡಿದು ಎಳೆದಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.
ಕೆಲವು ಪೊಲೀಸ್ ಸಿಬ್ಬಂದಿ ರಸ್ತೆ ಮಧ್ಯೆ ಮಹಿಳೆಯನ್ನ ಎಳೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಸ್ ಆಗಿದ್ದು, ಪೊಲೀಸರ ಕೃತ್ಯಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕಿದ್ಧಾರೆ. ಮಧ್ಯಪ್ರದೇಶದ ರಾಹ್ಲಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆದ ಬಳಿಕ, ಮಹಿಳೆ ಮೊದಲಿಗೆ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
सागर में एक महिला की पिटाई का वीडियो वायरल हो रहा है, महिला अपनी बेटी के साथ बाहर निकली थी, मास्क नहीं पहना था बेटी ने भी मुंह पर सिर्फ स्कॉर्फ बांध रखा था। इस बीच पुलिस ने चेकिंग के दौरान गांधी चौक के पास उसे पकड़ लिया @ndtvindia @ndtv @manishndtv @alok_pandey @GargiRawat pic.twitter.com/rKwichtrpd
— Anurag Dwary (@Anurag_Dwary) May 19, 2021
ಮಹಿಳೆ ಮತ್ತು ಮಗಳು ಮಾಸ್ಕ್ ಧರಿಸದೇ ಹೋಗುತ್ತಿದ್ದರಿಂದ ಪೊಲೀಸರು ಅವರನ್ನ ತಡೆದಿದ್ದಾರೆ. ನಂತರ ಶಿಕ್ಷೆ ನೀಡುವುದಾಗಿ ತಿಳಿಸಿ ಜೀಪಿನೊಳಗೆ ಮಹಿಳೆಯನ್ನು ಕರೆದೊಯ್ಯಲು ಪ್ರಯತ್ನಿಸಿದಾಗ ಮಹಿಳೆ ಮತ್ತು ಆಕೆಯ ಮಗಳು ವಿರೋಧಿಸಿದ್ದಾರೆ. ಈ ವೇಳೆ ಪೊಲೀಸರು ಮಹಿಳೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳಾ ಪೊಲೀಸ್ ಸೇರಿದಂತೆ ಕೆಲವು ಪೊಲೀಸ್ ಸಿಬ್ಬಂದಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಕೆಳಕ್ಕೆ ತಳ್ಳಿ ಆಕೆಯ ಕೂದಲನ್ನು ಎಳೆದಾಡಿದ್ದಾರೆ.
ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಹ್ಲಿಯ ಉಪ-ವಿಭಾಗೀಯ ಪೊಲೀಸ್ ಕಮಲ್ ಸಿಂಗ್ , ಈ ವೀಡಿಯೋದಲ್ಲಿ ಅರ್ಧದಷ್ಟು ಘಟನೆಯನ್ನು ಮಾತ್ರ ತೋರಿಸಲಾಗಿದೆ. ಮಹಿಳೆಯೇ ಮೊದಲು ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ನಂತರ ಆಕೆಯ ಉಗುರುಗಳಿಂದ ಪೊಲೀಸ್ ಮುಖದ ಮೇಲೆ ಗಾಯಗೊಳಿಸಿದ್ದಾಳೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.