ವಿರಾಟ್ – ಅನುಷ್ಕಾರ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ

1 min read

ವಿರಾಟ್ – ಅನುಷ್ಕಾರ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ

ಮುಂಬೈ: ದುಬೈನಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾದ ವಿರುದ್ಧ ಭಾರತವು ಸೋಲುಂಡ ಬಳಿಕ ವಿರಾಟ್ ದಂಪತಿ ಹಾಗೂ ಅವರ ಮಗಳ ವಿರುದ್ಧ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾಗಳಲ್ಲಿ ದ್ವೇಷಪೂರಿತ ಕಮೆಂಟ್ ಗಳನ್ನ ಮಾಡಿರೋದು ಕಂಡುಬಂದಿದೆ. ಈ ನಡುವೆ ಆನ್ ಲೈನ್ ನಲ್ಲಿ ಕೊಹ್ಲಿ ಪುತ್ರಿ  ವಿರುದ್ಧ ಅತ್ಯಾಚಾರದ ಬೆದರಿಕೆಗಳು ಕಂಡುಬಂದಿದೆ. ಈ ಬಗ್ಗೆ ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.  ಅಷ್ಟೇ ಅಲ್ಲ  ಕೆಲವರು ಇದನ್ನ ಕೋಮುವಾದದ ಬಣ್ಣ ಹೆಚ್ಚಿ ಟೀಮ್ ಇಂಡಿಯಾ ವೇಗಿ  ಮೊಹಮ್ಮದ್ ಶಮಿ ವಿರುದ್ಧವೂ ದಾಳಿ ಮಾಡಿದ್ದರು. ಆದ್ರೆ ಇದರ ವಿರುದ್ಧ ಕೊಹ್ಲಿ ಧ್ವನಿ ಎತ್ತಿದ್ದರು. ಶಮಿ ಪರ ನಿಂತಿದ್ರು. ಸಾಕಷ್ಟು ಮಂದಿ ಶಮಿ ಬೆಂಬಲಕ್ಕೆ ಬಂದಿದ್ದರು.

ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ ಶಮಿ ಪರವಾಗಿ ನಿಂತಿದ್ದರು. ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ್ದರು. ಅಲ್ಲದೇ ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು  ಹೇಳಿದ್ದರು.

“ಮ್ಯಾನ್ಮಾರ್ ನಿಂದ 37000 ಕ್ಕೂ ಹೆಚ್ಚು ಮಂದಿ ಭಾರತಕ್ಕೆ ಪಲಾಯನ”..!

ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವ ಬಾಂದವ್ಯವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೋಮುದಾಳಿ ನಡೆಸಿದ್ದವರಿಗೆ ತೀಕ್ಷ್ಣವಾಗಿ ಉತ್ತರಿಸಿದ್ದರು.

ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ಕೆಲ ವಿಕೃತ ಮನಸ್ಸಿನವರು  ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊಹ್ಲಿಯ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್‍ಗಳು ಈಗ ವೈರಲ್ ಆಗುತ್ತಿದೆ. ಅಲ್ಕದೇ  ಪಾಕ್ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಟ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಪ್ರಿಯ ವಿರಾಟ್  ಈ ಜನರು ದ್ವೇಷದಿಂದ ತುಂಬಿದ್ದಾರೆ.  ಏಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಸ್ಯಾಂಡಲ್ ವುಡ್ ನಟರು ಒಟ್ಟಾಗಿರುವ ಫೋಟೋ ಶೇರ್ ಮಾಡಿ ಒಗ್ಗಟ್ಟಿನ ಸಂದೇಶ ರವಾನಿಸಿದ ಜಗ್ಗೇಶ್

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd