200M insta ಫಾಲೋವರ್ಸ್ – ಸೋಶಿಯಲ್ ಮೀಡಿಯಾದಲ್ಲೂ ವಿರಾಟ್ ಕೊಹ್ಲಿಯೇ ಕಿಂಗ್
ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ತಂಡದ ದಿಗ್ಗಜ ಬ್ಯಾಟ್ಸ್ ಮನ್, ಕೊಹ್ಲಿ ಬ್ಯಾಟ್ ಬೀಸಲಿ ಬೀಸದಿರಲಿ ಅಲ್ಲೊಂದು ದಾಖಲೆ ಸೃಷ್ಟಿಯಾಗಿರುತ್ತದೆ. ಆದ್ರೆ ಟೀಂ ಇಂಡಿಯಾದ ಮಾಜಿ ನಾಯಕ ಕೊಹ್ಲಿ ಫೀಲ್ಡ್ ಗೆ ಇಳಿಯದೇನೆ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 200 ಮಿಲಿಯನ್ (20 ಕೋಟಿ) ಫಾಲೋವರ್ಸ್ ಹೊಂದಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ 3ನೇ ಅಥ್ಲೀಟ್ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
ಕಿಂಗ್ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವಂತಹ ಆಟಗಾರ. ತಮ್ಮ ದಿನನಿತ್ಯದ ಚಟುವಟಿಕೆಗಳನ್ನ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ 200 ಮಿಲಿಯನ್ ಫಾಲೋವರ್ಸ್ ಹೊಂದಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಬಲಿಷ್ಠ 200 ಮಿಲಿಯನ್. ಇನ್‌ಸ್ಟಾಗ್ರಾಂ ಕುಟುಂಬಕ್ಕೆ ಅನಂತ ಧನ್ಯವಾದಗಳು ಎಂದು ತಮ್ಮ ಜೀವನದ ಅಮೂಲ್ಯ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ಜಗತ್ತಿನ ಮೂರನೇ ಅಥ್ಲೀಟ್ ಪಟ್ಟಿಯಲ್ಲಿ ವಿರಾಟ್ ಮೂರನೇ ಸ್ಥಾನಕ್ಕೇಕರಿದ್ದಾರೆ. ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಹಂಚಿಕೊಂಡಿದ್ದಾರೆ.
ಪೋರ್ಚುಗಲ್‌ನ ಕ್ರಿಸ್ಟಿಯಾನೋ ರೊನಾಲ್ಡೋ 450 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 333 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿರುವ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.








