VIRAT ಅಪರೂಪದ ದಾಖಲೆ.. ವಿಶ್ವದ ಎರಡನೇ ಆಟಗಾರ
ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ 8,000 ರನ್ ಗಳ ಮೈಲುಗಲ್ಲು ತಲುಪಿದ್ದಾರೆ. ಶ್ರೀಲಂಕಾ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಈ ಸಾಧನೆ ಮಾಡಿದ್ದಾರೆ.
ಅದೇ ರೀತಿ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವುದು ಗೊತ್ತೇ ಇದೆ. ಟೆಸ್ಟ್ ಕ್ರಿಕೆಟ್‌ನಲ್ಲಿ 8,000 ರನ್ ಗಳಿಸಿದ ಆರನೇ ಭಾರತೀಯ ಬ್ಯಾಟ್ಸ್‌ಮನ್ ಕೊಹ್ಲಿ.
ಈ ಹಿಂದೆ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಮಾತ್ರ ಈ ಸಾಧನೆ ಮಾಡಿದ್ದರು.
ವಿರಾಟ್ ಕೊಹ್ಲಿ 169 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. 154 ಇನ್ನಿಂಗ್ಸ್‌ಗಳೊಂದಿಗೆ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ.
ಅದೇ ರೀತಿ ಕೊಹ್ಲಿ 100ನೇ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. 100ನೇ ಟೆಸ್ಟ್ ನಲ್ಲಿ 8,000 ಟೆಸ್ಟ್ ರನ್ ಗಳಿಸಿದ ಎರಡನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಈ ಸಾಧನೆ ಮಾಡಿದ್ದರು. 2006ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 100ನೇ ಟೆಸ್ಟ್ ಪಂದ್ಯದಲ್ಲಿ ಪಾಂಟಿಂಗ್ 8000 ರನ್ ಪೂರೈಸಿದ್ದರು.
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 45 ರನ್ ಗಳಿಗೆ ಆಟ ಮುಗಿಸಿದ್ದಾರೆ. ಆ ಮೂಲಕ ವಿರಾಟ್ ಅಭಿಮಾನಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ.