Virat Kohli – ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.
ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟರ್ ಆಗಿ ವಿರಾಟ್ ದಾಖಲೆ ಬರೆದಿದ್ದಾರೆ.
ಹೈದರಾಬಾದ್ ನ ಉಪ್ಪಾಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಮೂರು ಬೌಂಡರಿ, ನಾಲ್ಕು ಸಿಕ್ಸರ್ ಗಳೊಂದಿಗೆ 63 ರನ್ ಗಳಿಸಿದರು.
ಇದರೊಂದಿಗೆ ಟೀಂ ಇಂಡಿಯಾ ವಾಲ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ವಿರಾಟ್ ಬ್ರೇಕ್ ಮಾಡಿದರು.
ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ತೆಂಡ್ಯುಲ್ಕರ್ 34357 ರನ್ ಗಳೊಂದಿಗೆ ಅತ್ಯಧಿಕ ರನ್ ಗಳಿಸಿರುವ ಬ್ಯಾಟರ್ ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಇದರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ರಾಹುಲ್ ದ್ರಾವಿಡ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 24064 ರನ್ ಗಳಿಸಿದ್ದಾರೆ.
ಭಾನುವಾರದ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 24078 ರನ್ ಗಳ ಮೈಲಿಗಲ್ಲು ಮುಟ್ಟಿದರು.
ಭಾರತದ ಅತ್ಯಧಿಕ ರನ್ ಸರದಾರರ ಪಟ್ಟಿಯಲ್ಲಿ ಸಚಿನ್, ಕೊಹ್ಲಿ, ದ್ರಾವಿಡ್, ಸೌರವ್ ಗಂಗೂಲಿ, ಎಂಎಸ್ ಧೋನಿ ಟಾಪ್ ಐದರಲ್ಲಿದ್ದಾರೆ.