Virat kohli – ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್ ನಲ್ಲಿ ವಿರಾಟ್
ಇದೇ ಮೊದಲ ಬಾರಿಗೆ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ ಐಸಿಸಿ ತಿಂಗಳ ಆಟಗಾರನ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಕೊಹ್ಲಿ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಹಾಗೂ ಜಿಂಬಾಬ್ವೆ ತಂಡದ ಆಲ್ರೌಂಡರ್ ಸಿಕಂದರ್ ರಾಝಾ ಕೂಡ ನಾಮ ನಿರ್ದೇಶನಗೊಂಡಿದ್ದಾರೆ.
ಪ್ರಸ್ತುತ ಟಿ 20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಅಜೇಯ 82 ರನ್, ನೆದರ್ ಲೆಂಡ್ ವಿರುದ್ದ 62 ರನ್, ಬಾಂಗ್ಲಾ ವಿರುದ್ಧವೂ ಅರ್ಧ ಶತಕ ಸಿಡಿಸಿದ್ದಾರೆ.
![Virat kohli icc-mens-player-month-nominees](http://saakshatv.com/wp-content/uploads/2022/10/virat-2.jpg)
ಸದ್ಯ ವಿರಾಟ್ ಮೆಗಾ ಟೂರ್ನಿಯ ಟಾಪ್ ರನ್ ಸ್ಕೋರರ್ ಆಗಿದ್ದಾರೆ.
ಡೇವಿಡ್ ಮಿಲ್ಲರ್ ಮೊನ್ನೆ ಭಾರತ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು.
ಇದಕ್ಕೂ ಮುನ್ನ ಭಾರತದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು.
ಇನ್ನು ಜಿಂಬಾಬ್ವೆ ತಂಡದ ಸಿಕಂದರ್ ರಾಝಾ ತಂಡವನ್ನು ಸೂಪರ್ 12ಗೆ ಹೋಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಮೊನ್ನೆ ಬಲಿಷ್ಠ ಪಾಕಿಸ್ತಾನ ವಿರುದ್ಧ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.