Virat kohli | ವಿರಾಟ್ ಕೊಹ್ಲಿಯನ್ನ ಟಾರ್ಗೆಟ್ ಮಾಡ್ತಿದ್ಯಾ ಬಿಸಿಸಿಐ..?
ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ (ಮಾರ್ಚ್ 4-8) ಪಂದ್ಯ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರ ವೃತ್ತಿಜೀವನದ 100 ನೇ ಟೆಸ್ಟ್ ಪಂದ್ಯ.
ವಿರಾಟ್ ಕೆರಿಯರ್ ನಲ್ಲಿ ಮೈಲುಗಲ್ಲಾಗಿರುವ ಈ ಪಂದ್ಯವನ್ನು ನೋಡಲು ಪ್ರೇಕ್ಷಕರಿಗೆ ಅನುಮತಿ ಇಲ್ಲ.
ನಾಯಕತ್ವದ ವಿಚಾರದಲ್ಲಿ ಕೊಹ್ಲಿ ಜತೆಗಿನ ವಿವಾದದಿಂದಾಗಿ ಬಿಸಿಸಿಐ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದೆ ಎಂದು ಕೊಹ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಸುದ್ದಿಯೊಂದು ವಿರಾಟ್ ಕೊಹ್ಲಿ ಅಭಿಮಾನಿಗಳ ಪಿತ್ತ ನೆತ್ತಿಗೇರುವಂತೆ ಮಾಡಿದೆ.
ಅದು ಏನಂದರೇ ಬೆಂಗಳೂರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ನೀಡಲು ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಸಿಎ) ಒಪ್ಪಿಗೆ ನೀಡಿದೆ.
ಇದನ್ನು ಕೆಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಖಚಿತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು 50 ಪ್ರತಿಶತ ಪ್ರೇಕ್ಷಕರಿಗೆ ಕ್ರೀಡಾಂಗಣದೊಳಗೆ ಅವಕಾಶ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಇದೀಗ ವಿರಾಟ್ ಅಭಿಮಾನಿಗಳು ಕೊಹ್ಲಿ ನೂರನೇ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆದಿದ್ದರೇ ಚೆನ್ನಾಗಿರುತ್ತಿತ್ತು ಎಂದು ಭಾವಿಸುತ್ತಿದ್ದಾರೆ.
ಅಲ್ಲದೇ ಬೆಂಗಳೂರಿನಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡುವ ವಿಷಯ ಮೊದಲೇ ಗೊತ್ತಿದ್ದರೂ ಮೊದಲ ಪಂದ್ಯ ಯಾಕೆ ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ.
virat-kohli-ind-vs-sl-2022-bengaluru